ಕುಶಾಲನಗರ: ಸಮೀಪದ ತೊರೆನೂರು ಸರ್ಕಾರಿ ಪ್ರೌಢಶಾಲೆಯಲ್ಲಿ ಸರ್ಕಾರದ ಮಹತ್ವಾಕಾಂಕ್ಷೆಯ ನಾವು ಮನುಜರು ವಿನೂತನ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
ಶಾಲಾ ಮುಖ್ಯ ಶಿಕ್ಷಕ ಬಿ.ಆರ್.ಸತ್ಯನಾರಾಯಣ ಮಾತನಾಡಿ, ನಾವು ಮನುಜರು ಕಾರ್ಯಕ್ರಮದಡಿಯಲ್ಲಿ ಮಕ್ಕಳಿಗೆ ವಿದ್ಯಾರ್ಥಿಗಳಲ್ಲಿ ಸಾಮಾಜಿಕ ಸಾಮರಸ್ಯ, ವೈಜ್ಞಾನಿಕ ಮನೋಭಾವ ಮತ್ತು ಸಹಬಾಳ್ವೆ ಬೆಳೆಸಲು ಈ ಕಾರ್ಯಕ್ರಮ ಸಂಘಟಿಸಲಾಗುತ್ತಿದೆ ಎಂದರು.
ಕನ್ನಡ ಭಾಷಾ ಶಿಕ್ಷಕ ಟಿ.ಬಿ.ಮಂಜುನಾಥ್ ಮಾತನಾಡಿ, ಶಾಲಾ ಮಕ್ಕಳಲ್ಲಿ ಸಾಮರಸ್ಯ ಮೂಡಿಸುವ ಹಾಗೂ ಸಾಂವಿಧಾನಿಕ ಮೌಲ್ಯ ಬಿತ್ತುವ ಮತ್ತು ವೈಜ್ಞಾನಿಕ ಮನೋಭಾವನೆ ಮೂಡಿಸಲು ನಾವು ಮನುಜರು ಕಾರ್ಯಕ್ರಮ ಸಹಕಾರಿಯಾಗಿದೆ ಎಂದರು.
ಸಂಪನ್ಮೂಲ ಶಿಕ್ಷಕ ಅನಿಲ್ ಕುಮಾರ್ ಮಾತನಾಡಿ, ಮಕ್ಕಳು ಜೀವನದಲ್ಲಿ ಅಳವಡಿಸಿಕೊಳ್ಳಬೇಕಾದ ನಾಯಕತ್ವ ಗುಣ, ವ್ಯಕ್ತಿತ್ವ ಬೆಳವಣಿಗೆ ಹಾಗೂ ಮಾನವೀಯ ಮೌಲ್ಯಗಳ ಕುರಿತು ಮಾಹಿತಿ ನೀಡಿದರು.
ನಂತರ ನಾವು ಮನುಜರು ಕಾರ್ಯಕ್ರಮದ ಕುರಿತು ಶಿಕ್ಷಕರು ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು.
ಶಾಲೆಯ ಶಿಕ್ಷಕರಾದ ಬಿ.ಪಿ.ಸವಿತ, ಜಿ.ಶ್ರೀಹರ್ಷ, ಎಂ.ಯು.ದಿವ್ಯ, ಎಸ್.ಕೆ.ಶೈಲಾ, ದೈಹಿಕ ಶಿಕ್ಷಣ ಶಿಕ್ಷಕಿ ಶೈಲಾ ಇದ್ದರು.