ಮಡಿಕೇರಿ: ಕೊಡವ ಭಾಷೆಯನ್ನು ಸಂವಿಧಾನದ 8ನೇ ಶೆಡ್ಯೂಲ್ಗೆ ಸೇರ್ಪಡೆಗೊಳಿಸುವ ಬಗ್ಗೆ ಶಿಫಾರಸ್ಸು ಮಾಡಬೇಕಾಗಿದ್ದು, ಇದಕ್ಕೆ ಸಂಬಂಧಿಸಿದಂತೆ ಕೊಡವ ಭಾಷೆಯ ಐತಿಹಾಸಿಕ ಹಿನ್ನೆಲೆ ಹಾಗೂ ಸಂಸ್ಕೃತಿ ಕುರಿತು ತಜ್ಞರಿಂದ ವರದಿಯನ್ನು ಪಡೆದು ಒಂದು ತಿಂಗಳೊಳಗೆ ಸಲ್ಲಿಸುವಂತೆ ರಾಜ್ಯ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಉಪ ನಿರ್ದೇಶಕರು ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿಗೆ ಪತ್ರ ಬರೆದಿರುವುದು ಸ್ವಾಗತಾರ್ಹ ಕ್ರಮವಾಗಿದೆ ಎಂದು ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆಯ ಅಧ್ಯಕ್ಷ ಎನ್.ಯು.ನಾಚಪ್ಪ ತಿಳಿಸಿದ್ದಾರೆ.

ಇದು ಸಿಎನ್ಸಿಯ ಹೋರಾಟಕ್ಕೆ ದೊರೆತ ಜಯವಾಗಿದೆ ಎಂದು ಅವರು ಪ್ರತಿಪಾದಿಸಿದ್ದಾರೆ.

ಸಂವಿಧಾನದ 8ನೇ ಶೆಡ್ಯೂಲ್ ಪಟ್ಟಿಯಲ್ಲಿ ಕೊಡವ ಭಾಷೆಯನ್ನು ಸೇರಿಸಬೇಕೆಂದು ಕೊಡವ ನ್ಯಾಷನಲ್ ಕೌನ್ಸಿಲ್ (ಸಿಎನ್ಸಿ) ಸಾಕಷ್ಟು ಹೋರಾಟಗಳನ್ನು ಮಾಡಿದೆ. ಈ ಬೇಡಿಕೆಯು ಕೊಡವಲ್ಯಾಂಡ್ ಭೌಗೋಳಿಕ-ರಾಜಕೀಯ ಸ್ವಾಯತ್ತತೆಯ ಜೊತೆಗೆ ಸಿಎನ್ಸಿಯ 10 ಪ್ರಮುಖ ಬೇಡಿಕೆಗಳ ಭಾಗವೂ ಆಗಿತ್ತು. ನಿರಂತರವಾಗಿ ಹೋರಾಡಿದ್ದು, ಮನವಿ ಪತ್ರಗಳನ್ನು ಬರೆದಿದ್ದು ಸೇರಿದಂತೆ ಅನೇಕ ಬಗೆಯಲ್ಲಿ ಹೋರಾಟ ನಡೆಸಲಾಗಿತ್ತು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.