ಸಿದ್ದಾಪುರ: ಚಲಿಸುತ್ತಿದ್ದ ಕಾರಿಗೆ ಕಾಡುಕೋಣ ಡಿಕ್ಕಿ ಹೊಡೆದ ಪರಿಣಾಮ ವಾಹನ ಜಖಂಗೊಂಡಿರುವ ಘಟನೆ ಕರಡಿಗೋಡು ಗ್ರಾಮದಲ್ಲಿ ನಡೆದಿದೆ.

ಕರಡಿಗೋಡು ಗ್ರಾಮದ ಖಾಸಗಿ ತೋಟದ ಚಾಲಕ ಸುಬ್ಬಯ್ಯ ಎಂಬವರು ಕರಡಿಗೋಡುವಿನಿಂದ ಸಿದ್ದಾಪುರಕ್ಕೆ ತೆರಳುತ್ತಿದ್ದರು. ಈ ಸಂದರ್ಭ ಟೀಕ್ ವುಡ್ ಎಸ್ಟೇಟ್ ಬಳಿಯಲ್ಲಿ ಕಾಫಿ ತೋಟದ ಒಳಗಿನಿಂದ ಕಾಡುಕೋಣ ರಭಸವಾಗಿ ಬಂದು ಕಾರಿಗೆ ಡಿಕ್ಕಿಯಾಗಿದೆ. ಪರಿಣಾಮ ಕಾರು ಜಖಂಗೊಂಡಿದ್ದು, ಅದೃಷ್ಟವಶಾತ್ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ವಿರಾಜಪೇಟೆ ವಲಯ ಅರಣ್ಯ ಅಧಿಕಾರಿ ಕೆ.ವಿ ಶಿವರಾಂ, ಉಪವಲಯ ವಲಯ ಅರಣ್ಯ ಅಧಿಕಾರಿ ಸಂಜೀತ್ ಸೋಮಯ್ಯ ಹಾಗೂ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಇತ್ತೀಚೆಗೆ ಕಾಡುಕೋಣ ಡಿಕ್ಕಿಯಾಗಿ ಗೂಡ್ಸ್ ವಾಹನವೊಂದು ಜಖಂಗೊಂಡಿತ್ತು. ಈ ವೇಳೆ ಕಾಡುಕೋಣದ ಕಾಲು ಮುರಿದಿತ್ತು. ಕಳೆದ ಕೆಲವು ತಿಂಗಳುಗಳ ಹಿಂದೆ ಇದೇ ಜಾಗದಲ್ಲಿ ಕಾಡುಕೋಣ ಆಟೊ ರಿಕ್ಷಾಗೆ ಡಿಕ್ಕಿಯಾಗಿ ರಿಕ್ಷಾ ಜಖಂಗೊಂಡಿತ್ತು. ಕರಡಿಗೋಡ ಗ್ರಾಮದಲ್ಲಿ ಕಾಡುಕೋಣ ಹಾವಳಿ ಮಿತಿಮೀರಿದ್ದು, ಕಾಫಿ ತೋಟದ ಗಿಡಗಳನ್ನು ನಾಶ ಮಾಡುತ್ತಿವೆ ಎಂದು ಬೆಳೆಗಾರರು ಆರೋಪಿಸಿದ್ದಾರೆ. ಕಾಡುಕೋಣಗಳಿಂದಾಗಿ ಕಾರ್ಮಿಕರು ಭಯದಲ್ಲೇ ಕೆಲಸ ಮಾಡುವ ಸ್ಥಿತಿ ಇದ್ದು, ಅರಣ್ಯ ಇಲಾಖೆ ಕಾಡುಕೋಣಗಳನ್ನು ಕಾಡಿಗೆ ಅಟ್ಟಬೇಕೆಂದು ಒತ್ತಾಯಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.