ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸುಂಟಿಕೊಪ್ಪ: ಆತಂಕ ಮೂಡಿಸಿದ್ದ ಕಾಡಾನೆ ಸೆರೆ

Published 6 ಸೆಪ್ಟೆಂಬರ್ 2023, 12:50 IST
Last Updated 6 ಸೆಪ್ಟೆಂಬರ್ 2023, 12:50 IST
ಅಕ್ಷರ ಗಾತ್ರ

ಸುಂಟಿಕೊಪ್ಪ (ಕೊಡಗು ಜಿಲ್ಲೆ): ಕಳೆದೊಂದು ವಾರದಿಂದ ಈ ಭಾಗದಲ್ಲಿ ಆತಂಕ ಮೂಡಿಸಿದ್ದ ಕಾಡಾನೆಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಬುಧವಾರ ಸೆರೆ ಹಿಡಿದರು.

18–20 ವರ್ಷದ ಗಂಡಾನೆಯ ದಾಳಿಗೆ ಸಿಲುಕಿ ಈಚೆಗೆ ಅರಣ್ಯ ಇಲಾಖೆ ಸಿಬ್ಬಂದಿ ಗಿರೀಶ್ ಎಂಬುವವರು ಮೃತಪಟ್ಟಿದ್ದರು. ಹಲವು ವಾಹನಗಳನ್ನು ಧ್ವಂಸಗೊಳಿಸಿದ್ದ ಈ ಆನೆ ತೋಟಗಳಲ್ಲಿನ ಬೆಳೆಗಳನ್ನು ನಾಶಪಡಿಸಿತ್ತು. ವಾಹನ ಸವಾರರ ಮೇಲೆ ಎರಗಿ ಅವರನ್ನು ಗಾಯಗೊಳಿಸುತ್ತಿತ್ತು. ಇದರಿಂದ ಕೆದಕಲ್ ವ್ಯಾಪ್ತಿಯಲ್ಲಿ ಜನರು ಓಡಾಡುವುದಕ್ಕೆ ಭಯಪಡುವ ವಾತಾವರಣ ಸೃಷ್ಟಿಯಾಗಿತ್ತು.

‘ದುಬಾರೆ ಆನೆ ಶಿಬಿರದ ಹರ್ಷ, ಪ್ರಶಾಂತ, ಅಜಯ್, ಲಕ್ಷ್ಮಣ, ವಿಕ್ರಮ ಎಂಬ 5 ಸಾಕಾನೆಗಳ ನೆರವಿನಿಂದ ಸುಮಾರು 100 ಮಂದಿ ಅರಣ್ಯ ಇಲಾಖೆಯ ಸಿಬ್ಬಂದಿ ಹರಸಾಹಸಪಟ್ಟು ಆನೆಯನ್ನು ಸೆರೆ ಹಿಡಿದರು’ ಎಂದು ಆನೆ ಕಾರ್ಯಪಡೆ ಡಿಸಿಎಫ್ ಪೂವಯ್ಯ ‘ಪ್ರಜಾವಾಣಿ’ಗೆ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT