ಸೋಮವಾರ, 15 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ವಿರಾಜಪೇಟೆ: ಬಾವಿಗೆ ಬಿದ್ದು ಕಾಡಾನೆ ಸಾವು

Published 18 ಜೂನ್ 2024, 5:11 IST
Last Updated 18 ಜೂನ್ 2024, 5:11 IST
ಅಕ್ಷರ ಗಾತ್ರ

ವಿರಾಜಪೇಟೆ (ಕೊಡಗು ಜಿಲ್ಲೆ): ತಾಲ್ಲೂಕಿನ ಕೆದಮುಳ್ಳೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಪಾಲಂಗಾಲ ಗ್ರಾಮದಲ್ಲಿ ಸೋಮವಾರ ರಾತ್ರಿ ನಿರ್ಮಾಣ ಹಂತದಲ್ಲಿದ್ದ ತೆರೆದ ಬಾವಿಯೊಂದಕ್ಕೆ ಬಿದ್ದು ಕಾಡಾನೆ ಮೃತಪಟ್ಟಿದೆ‌.

ಬಾವಿ ಸುಮಾರು 20 ಅಡಿಗೂ ಹೆಚ್ಚು ಆಳವಿದೆ.

ಗ್ರಾಮ ಪಂಚಾಯಿತಿ ವತಿಯಿಂದ ಉದ್ಯೋಗ ಖಾತರಿ ಯೋಜನೆ ಅಡಿಯಲ್ಲಿ ಈ ಬಾವಿಯನ್ನು ನಿರ್ಮಾಣ ಮಾಡಲಾಗುತ್ತಿತ್ತು. ಇಲ್ಲಿಗೆ ಆಕಸ್ಮಿಕವಾಗಿ ಬಿದ್ದ ಗಂಡಾನೆ ಮೃತಪಟ್ಟಿದೆ‌.

ಸ್ಥಳಕ್ಕೆ ಅರಣ್ಯಾಧಿಕಾರಿಗಳು ತೆರಳಿದ್ದು ಪರಿಶೀಲನೆ ನಡೆಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT