ಸಿದ್ದಾಪುರ: ಬಾಡಗ ಬಾಣಂಗಾಲ ಹಾಗೂ ಪುಲಿಯೇರಿ ವ್ಯಾಪ್ತಿಯಲ್ಲಿ ಕಾಡಾನೆಗಳನ್ನು ಕಾಡಿಗೆ ಅಟ್ಟುವ ಕಾರ್ಯಾಚರಣೆ ಶುಕ್ರವಾರ ನಡೆಯಿತು.

ಬಾಡಗ ಬಾಣಂಗಾಲ ಗ್ರಾಮದ ಕೌರಿಬೆಟ್ಟ ಕಾಫಿ ತೋಟದಲ್ಲಿ ಕಾಡಾನೆ ದಾಳಿಯಿಂದ ಕಾವಲುಗಾರ ಮೃತಪಟ್ಟ ಹಿನ್ನೆಲೆಯಲ್ಲಿ ಗ್ರಾಮಸ್ಥರು ಹಾಗೂ ಕಾರ್ಮಿಕರು ಭಯಭೀತರಾಗಿದ್ದರು.

ಶಾಸಕ ಎ.ಎಸ್. ಪೊನ್ನಣ್ಣ ಅವರ ಸೂಚನೆ ಮೇರೆಗೆ ತಿತಿಮತಿ ಹಾಗೂ ವಿರಾಜಪೇಟೆ ಅರಣ್ಯ ವಿಭಾಗದ ಸಿಬ್ಬಂದಿ ಜಂಟಿ ಕಾರ್ಯಾಚರಣೆ ನಡೆಸಿದರು. ಈ ವೇಳೆ ಕಾಫಿ ತೋಟದಲ್ಲಿ ಒಂಟಿ ಸಲಗ ಕಾಣಸಿದ್ದು, ಪಟಾಕಿ ಸಿಡಿಸಿ ಅರಣ್ಯದತ್ತ ಅಟ್ಟಲಾಯಿತು. ಕಾರ್ಯಾಚರಣೆಯಲ್ಲಿ ವಿರಾಜಪೇಟೆ ವಲಯ ಅರಣ್ಯಾಧಿಕಾರಿ ಶಿವರಾಂ, ತಿತಿಮತಿ ವಲಯ ಅರಣ್ಯಾಧಿಕಾರಿ ಗಂಗಾಧರ್, ಉಪವಲಯ ಅರಣ್ಯಾಧಿಕಾರಿ ಸಂಜಿತ್ ಸೋಮಯ್ಯ, ಶಶಿ, ಆರ್.ಆರ್.ಟಿ ಹಾಗೂ ಆನೆ ಕಾರ್ಯಪಡೆಯ ಸಿಬ್ಬಂದಿ ಭಾಗವಹಿಸಿದ್ದರು.

ಬಾಡಗ ಬಾಣಂಗಾಲ ವ್ಯಾಪ್ತಿಯಲ್ಲಿ ಕಾಡಾನೆ ಹಿಂಡು ಬೀಡುಬಿಟ್ಟಿದ್ದು, ಅರಣ್ಯಕ್ಕೆ ಅಟ್ಟಿದ ಬಳಿಕ ಮರಳಿ ತೋಟಕ್ಕೆ ಬರುತ್ತಿವೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಅರಣ್ಯದಿಂದ ಮರಳಿ ಬರದಂತೆ ಕ್ರಮ ಕೂಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.