ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಾರಂಗಿ: ಸಂಗೀತ ಕಾರಂಜಿ ವೇಳೆ ಬಂದ ಕಾಡಾನೆ; ಪ್ರವಾಸಿಗರು ಚಿಲ್ಲಾಪಿಲ್ಲಿ

Last Updated 23 ಜುಲೈ 2022, 16:19 IST
ಅಕ್ಷರ ಗಾತ್ರ

ಮಡಿಕೇರಿ: ಕೊಡಗು ಜಿಲ್ಲೆಯ ಕುಶಾಲನಗರ ತಾಲ್ಲೂಕಿನ ಹಾರಂಗಿ ಉದ್ಯಾನಕ್ಕೆ ಶನಿವಾರ ಸಂಜೆ ಸಂಗೀತ ಕಾರಂಜಿ ನಡೆಯುವ ವೇಳೆ ಕಾಡಾನೆಯೊಂದು ನುಗ್ಗಿದ್ದರಿಂದ ಪರಿಣಾಮ ಪ್ರವಾಸಿಗರು ಚೆಲ್ಲಾಪಿಲ್ಲಿಯಾಗಿ ಓಡಿ ಹೋದರು.

ಹಾರಂಗಿ ಅಣೆಕಟ್ಟೆಗೆ ಹೊಂದಿಕೊಂಡಂತೆ ಇರುವ ಅತ್ತೂರು ಮೀಸಲು ಅರಣ್ಯ ಪ್ರದೇಶದಿಂದ ಬಂದ ಕಾಡಾನೆ ಅಣೆಕಟ್ಟೆ ಉದ್ಯಾನದೊಳಗೆ ಅಡ್ಡಾಡಿದೆ. ಸಂಜೆ ಸಂಗೀತ ಕಾರಂಜಿ ವೀಕ್ಷಣೆ ಆಗಮಿಸಿದ್ದ ಪ್ರವಾಸಿಗರು ಚೆಲ್ಲಾಪಿಲ್ಲಿಯಾಗಿ ಓಡಿಹೋಗಿದ್ದಾರೆ. ಜಲಾಶಯದ ಭದ್ರತಾ ಪಡೆಯ ಸಿಬ್ಬಂದಿಗಳು ಎಲ್ಲಾ ಪ್ರವಾಸಿಗರನ್ನು ಸುರಕ್ಷಿತವಾಗಿ ಹೊರ ಕಳುಹಿಸಿದ್ದಾರೆ.

ಹಾರಂಗಿ ಗ್ರಾಮದ ಕಿರು ಸೇತುವೆ ಬಳಿಯ ಕಾವೇರಿ ದೇವಾಲಯ‌ ಮುಂಭಾಗ ಹಾರಂಗಿ ಅಣೆಕಟ್ಟೆ ಆವರಣದಲ್ಲಿರುವ ಗೇಟ್ ಒಂದನ್ನು ಒದ್ದು ಹೊರಕ್ಕೆ ಬಂದ ಕಾಡಾನೆ ಗ್ರಾಮದೊಳಗಿನಿಂದ ಹಾದು ಸಮೀಪದ ದೊಡ್ಡತ್ತೂರು ಅರಣ್ಯ ಪ್ರದೇಶದತ್ತ ತೆರಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT