ಮಂಗಳವಾರ, ಏಪ್ರಿಲ್ 20, 2021
32 °C

ಕೊಡಗು: ಕಾಡಾನೆ ದಾಳಿಗೆ ಕಾರ್ಮಿಕ ಬಲಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

iStock DH

ಸಿದ್ದಾಪುರ (ಕೊಡಗು ಜಿಲ್ಲೆ): ಕಾಡಾನೆ ದಾಳಿಯಿಂದ ಕಾರ್ಮಿಕ ಸ್ಥಳದಲ್ಲೇ ಮೃತಪಟ್ಟ ಘಟನೆ ಸಿದ್ದಾಪುರ ಸಮೀಪದ ಕಾಫಿ ತೋಟದಲ್ಲಿ ನಡೆದಿದೆ.

ಬಿ.ಬಿ.ಟಿ.ಸಿ ಸಂಸ್ಥೆಗೆ ಸೇರಿದ ಬೀಟಿಕಾಡು ಕಾಫಿ ತೋಟದಲ್ಲಿ ಪಲ್ಪಿಂಗ್ ಕಣದಲ್ಲಿ ಸಂದೀಪ್ (22) ಹಾಗೂ ರಾಜು ಕಾವಲುಗಾರರಾಗಿ ಕೆಲಸ ಮಾಡುತ್ತಿದ್ದು, ಶುಕ್ರವಾರ ಬೆಳಗ್ಗಿನ ಜಾವ ಇಬ್ಬರು‌ ನಿದ್ರಿಸುತ್ತಿದ್ದ ವೇಳೆ ಕಾಡಾನೆಯೊಂದು ದಾಳಿ ನಡೆಸಿದೆ.

ಈ ಸಂದರ್ಭ ಕಾಡಾನೆ ಸಂದೀಪ್ ಅವರ ತಲೆಗೆ ತುಳಿದಿದೆ. ಪರಿಣಾಮ ಸಂದೀಪ್ ತಲೆಯು ಛಿದ್ರಗೊಂಡಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮತ್ತೊಬ್ಬ ಕಾರ್ಮಿಕ ರಾಜು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಸ್ಥಳಕ್ಕೆ ಅರಣ್ಯ ಇಲಾಖೆಯ ಅಧಿಕಾರಿಗಳು, ಸಿದ್ದಾಪುರ ಪೊಲೀಸರು ಭೇಟಿ ನೀಡಿ‌ ಪರಿಶೀಲನೆ ನಡೆಸಿದರು.

ನಿರಂತರ ಕಾಡಾನೆ ಹಾವಳಿ:

ಸಿದ್ದಾಪುರ ಹಾಗೂ ಸುತ್ತಮುತ್ತಲ ಪ್ರದೇಶದಲ್ಲಿ ಕಾಡಾನೆ ಹಾವಳಿ ಮಿತಿಮೀರಿದ್ದು, ಕಾಫಿ ತೋಟಗಳಲ್ಲಿ ಕಾಡಾನೆಗಳು ಬೀಡುಬಿಟ್ಟಿದೆ‌. ಕಾಡಾನೆಗಳನ್ನು ಅರಣ್ಯಕ್ಕೆ ಅಟ್ಟಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು