ಶುಕ್ರವಾರ, 29 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಡಾನೆಗಳನ್ನು ಕಾಡಿಗಟ್ಟಿದ ಅರಣ್ಯ ಸಿಬ್ಬಂದಿ

Published 9 ಆಗಸ್ಟ್ 2023, 15:50 IST
Last Updated 9 ಆಗಸ್ಟ್ 2023, 15:50 IST
ಅಕ್ಷರ ಗಾತ್ರ

ನಾಪೋಕ್ಲು: ಸಮೀಪದ ಮರಂದೋಡದಲ್ಲಿ ಕಾಡಾನೆಗಳ ಹಾವಳಿ ಹೆಚ್ಚಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿ ಬುಧವಾರ ಕಾರ್ಯಾಚರಣೆ ನಡೆಸಿ ಕಾಡಾನೆ ಹಿಂಡನ್ನು ಕಾಡಿಗಟ್ಟಿದರು.

ಮಂಗಳವಾರ ಅರಣ್ಯ ಇಲಾಖೆಯ ಸಹಯೋಗದೊಂದಿಗೆ ಕಾಡಾನೆಗಳನ್ನು ಕಾಡಿಗಟ್ಟುವ ಕಾರ್ಯಾಚರಣೆ ನಡೆಸಲಾಗಿತ್ತು.  ಆದರೆ, ಬುಧವಾರ ಮತ್ತೆ ಹಿಂತಿರುಗಿರುವ ಕಾಡಾನೆಗಳು ಗ್ರಾಮದ ಮುಕ್ಕಾಟಿರ ಪ್ರಕಾಶ್ ಅವರ ತೋಟದ ಗೇಟ್ ಅನ್ನು ಜಖಂಗೊಳಿಸಿವೆ. ಅಲ್ಲದೇ ಶಾಲೆಯ ಗೇಟ್‌ನ್ನು ಕೂಡ ಜಖಂಗೊಳಿಸಿವೆ. ತೋಟಗಳಲ್ಲಿ ಅಡ್ಡಾಡುತ್ತಿದ್ದ ಕಾಡಾನೆಗಳನ್ನು ಬುಧವಾರ ಮತ್ತೆ ಕಾಡಿಗಟ್ಟಲಾಗಿದೆ.

ಕಾರ್ಯಾಚರಣೆಯಲ್ಲಿ ಅರಣ್ಯ ಸಂರಕ್ಷಣಾಧಿಕಾರಿ ಬಿ.ಎಂ ಶರಣಬಸಪ್ಪ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಕೆ.ಎ ನೆಹರು ಮಾರ್ಗದರ್ಶನದಲ್ಲಿ ವಿರಾಜಪೇಟೆ ವಲಯ ಅರಣ್ಯಾಧಿಕಾರಿ ಕಳ್ಳಿರದೇವಯ್ಯ ನೇತೃತ್ವದಲ್ಲಿ ಅರಣ್ಯ ಆನೆ ಕ್ಷಿಪ್ರ ಕಾರ್ಯಪಡೆ ತಂಡ ಕೆದಮುಳ್ಳೂರು ಹಾಗೂ ಚೆಯ್ಯಂಡಾಣೆ ಕ್ಯಾಂಪ್ ಸಿಬ್ಬಂದಿ ಹಾಗೂ ಗ್ರಾಮಸ್ಥರು ಭಾಗವಹಿಸಿದ್ದರು.

ನಾಪೋಕ್ಲು:ಸಮೀಪದ ಮರಂದೋಡ ಗ್ರಾಮದಲ್ಲಿ ಕಾಡಾನೆಗಳ ಹಾವಳಿ ಮುಂದುವರಿದಿದ್ದು ಗ್ರಾಮಸ್ಥರು ಸಂಕಷ್ಟ ಅನುಭವಿಸುತ್ತಿದ್ದಾರೆ. ಮಂಗಳವಾರ ಅರಣ್ಯ ಇಲಾಖೆಯ ಸಹಯೋಗದೊಂದಿಗೆ ಕಾಡಾನೆಗಳನ್ನು ಕಾಡಿಗಟ್ಟುವ ಕಾರ್ಯಾಚರಣೆ ನಡೆಸಲಾಗಿತ್ತು. ಬುಧವಾರ ಮತ್ತೆ ಹಿಂತಿರುಗಿರುವ ಕಾಡಾನೆಗಳು ಮರಂದೋಡ ಗ್ರಾಮದ ಮುಕ್ಕಾಟಿರ ಪ್ರಕಾಶ್ ಅವರ ತೋಟದ ಗೇಟ್ ಅನ್ನು ಜಖಂಗೊಳಿಸಿವೆ.ಮರಂದೋಡ ಶಾಲೆಯ ಗೇಟನ್ನು ಕೂಡ ಜಖಂಗೊಳಿಸಿವೆ. ತೋಟಗಳಲ್ಲಿ ಅಡ್ಡಾಡುತ್ತಿದ್ದ ಕಾಡಾನೆಗಳನ್ನು ಬುಧವಾರ ಮತ್ತೆ ಕಾಡಿಗಟ್ಟಲಾಗಿದೆ.ಅರಣ್ಯ ಇಲಾಖೆ ನಡೆಸಿದ ಕಾರ್ಯಾಚರಣೆಯಲ್ಲಿ ಅರಣ್ಯ ಸಂರಕ್ಷಣಾಧಿಕಾರಿ ಬಿ.ಎಂ ಶರಣಬಸಪ್ಪ ,ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಕೆ.ಎ ನೆಹರು ಮಾರ್ಗದರ್ಶನದಲ್ಲಿ ವಿರಾಜಪೇಟೆ ವಲಯ ಅರಣ್ಯಾಧಿಕಾರಿ ಕಳ್ಳಿರದೇವಯ್ಯ ನೇತೃತ್ವದಲ್ಲಿ ಅರಣ್ಯ ಆನೆ ಕ್ಷಿಪ್ರ ಕಾರ್ಯಪಡೆ ತಂಡ ಕೆದಮುಳ್ಳೂರು ಹಾಗೂ ಚೆಯ್ಯಂಡಾಣೆ ಕ್ಯಾಂಪ್ ಸಿಬ್ಬಂದಿಗಳು ಹಾಗೂ ಗ್ರಾಮಸ್ಥರು ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT