ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಡಿಕೇರಿ: ವಿಶ್ವ ಪರಿಸರ ದಿನಾಚರಣೆ ಇಂದು

Published 4 ಜೂನ್ 2023, 16:35 IST
Last Updated 4 ಜೂನ್ 2023, 16:35 IST
ಅಕ್ಷರ ಗಾತ್ರ

ಮಡಿಕೇರಿ: ಜೂನ್ 5 ರಂದು ಬೆಳಿಗ್ಗೆ 10 ಗಂಟೆಗೆ ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ಗಿಡ ನೆಡುವ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭವು ನೂತನ ನ್ಯಾಯಾಲಯ ಆವರಣದಲ್ಲಿ ನಡೆಯಲಿದೆ. 

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಕೊಡಗು ಪೊಲೀಸ್ ಇಲಾಖೆ, ಅರಣ್ಯ ಇಲಾಖೆ ಸಾರ್ವಜನಿಕ ಶಿಕ್ಷಣ ಇಲಾಖೆ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್, ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ ವತಿಯಿಂದ ಈ ಕಾರ್ಯಕ್ರಮ ಆಯೋಜನೆಗೊಂಡಿದೆ.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಅಧ್ಯಕ್ಷರು ಹಾಗೂ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಡಿ.ಟಿ.ಪುಟ್ಟರಂಗಸ್ವಾಮಿ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.

ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಎಸ್.ಆಕಾಶ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಧೀಶ ಕೆ.ಬಿ.ಪ್ರಸಾದ್, ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಬಿ.ಎನ್.ಎನ್.ಮೂರ್ತಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಭಾಗವಹಿಸುವರು ಎಂದು ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT