ಮಡಿಕೇರಿ: ಸಂಪುಟ ವಿಸ್ತರಣೆ ಕಾರ್ಯಕ್ರಮಕ್ಕೆ ಗೈರಾಗಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಡಿಕೇರಿಯಲ್ಲಿ ಹೇಳಿಕೆ ನೀಡಿರುವ ಸಚಿವ ಶ್ರೀರಾಮುಲು ಅವರು, ‘ನನ್ನ ಮನೆಯಲ್ಲಿ ಮಗಳ ಮದುವೆ ಕಾರ್ಯಕ್ರಮವಿದೆ. ಅದರ ತಯಾರಿಯಲ್ಲಿ ನಾನು ಇದ್ದೇನೆ. ಹೀಗಾಗಿ ನಾನು ಬೆಂಗಳೂರಿಗೆ ಹೋಗಲು ಸಾಧ್ಯವಾಗಿಲ್ಲ’ಎಂದು ಸ್ಪಷ್ಟನೆ ನೀಡಿದರು.

‘ಸಂಪುಟ ವಿಸ್ತರಣೆಯನ್ನು ನಮ್ಮ ನಾಯಕರು ಸಮರ್ಥವಾಗಿ ನಿಭಾಯಿಸಲಿದ್ದಾರೆ. ನನಗೆ ಯಾವುದೇ ಅಸಮಾಧಾನವಿಲ್ಲ. ಮೂಲ ಬಿಜೆಪಿಗರು ಹಾಗೂ ವಲಸಿಗರು ಅನ್ನುವ ವ್ಯತ್ಯಾಸ ಇಲ್ಲ’ ಎಂದ ಅವರುಉಪಮುಖ್ಯಮಂತ್ರಿ ಸ್ಥಾನ ಸಿಗದ ವಿಚಾರಕ್ಕೆ ಸಂಬಂಧಿಸಿದ ಪ್ರಶ್ನೆಗೆ, ‘ಪಕ್ಷವು ಸೂಕ್ತ ಸಮಯದಲ್ಲಿ ಸೂಕ್ತ ನಿರ್ಧಾರ ತೆಗೆದುಕೊಳ್ಳಲಿದೆ’ ಎಂದು ಹೇಳಿದರು.

‘ಕೊರೊನಾ ವೈರಸ್ ದೇಶದಲ್ಲಿ ಆತಂಕ ಮೂಡಿಸುತ್ತಿದೆ. ವಿಮಾನ ನಿಲ್ದಾಣ ಹಾಗೂ ರೈಲ್ವೆ ನಿಲ್ದಾಣಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ರಾಜ್ಯದ 74 ಜನರ ರಕ್ತ ಮಾದರಿ ಸಂಗ್ರಹಿಸಿ ಪರೀಕ್ಷಿಸಲಾಗಿದೆ. ಎಲ್ಲವೂ ನೆಗೆಟಿವ್ ಆಗಿ ಬಂದಿದೆ. ಆದ್ದರಿಂದ ಆತಂಕ ಬೇಡ’ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.