ಮಡಿಕೇರಿ: ಯೋಧನಮನ ಕಾರ್ಯಕ್ರಮ ನಾಳೆ

7

ಮಡಿಕೇರಿ: ಯೋಧನಮನ ಕಾರ್ಯಕ್ರಮ ನಾಳೆ

Published:
Updated:

ಮಡಿಕೇರಿ: ಕೊಡಗು ಯೋಧಾಭಿಮಾನಿ ಬಳಗದ ಆಶ್ರಯದಲ್ಲಿ ಇಲ್ಲಿನ ಕೊಡವ ಸಮಾಜ ಸಹಯೋಗದಲ್ಲಿ ‘ಯಾರಿಗಾಗಿ ನಮ್ಮವರ ಬಲಿದಾನ’ ಯೋಧನಮನ ಕಾರ್ಯಕ್ರಮ ಜುಲೈ 8ರಂದು ನಗರದ ಕೊಡವ ಸಮಾಜ ಸಭಾಂಗಣದಲ್ಲಿ  ಬೆಳಿಗ್ಗೆ 10.30ಕ್ಕೆ ನಡೆಯಲಿದೆ.

ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಹಾಗೂ ಜನರಲ್ ತಿಮ್ಮಯ್ಯ ಫೋರಂ ಅಧ್ಯಕ್ಷ ಕಂಡ್ರತಂಡ ಸಿ. ಸುಬ್ಬಯ್ಯ ಅಧ್ಯಕ್ಷತೆ ವಹಿಸಲಿದ್ದಾರೆ. ಜಿಲ್ಲಾಧಿಕಾರಿ ಪಿ.ಐ. ಶ್ರೀವಿದ್ಯಾ, ಕುಪ್ಪಂಡ ಪಿ.ನಂಜಪ್ಪ, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಪಿ.ರಾಜೇಂದ್ರ ಪ್ರಸಾದ್, ವಾಗ್ಮಿ ಶ್ರೀಕೃಷ್ಣ ಉಪಾಧ್ಯಾಯ, ಸಾಮಾಜಿಕ ಚಿಂತಕ ಅರ್ಜುನ್ ದೇವಾಲದಕೆರೆ ಪಾಲ್ಗೊಳ್ಳಲಿದ್ದಾರೆ.

ದೇಶರಕ್ಷಣೆಯಲ್ಲಿ ತೊಡಗಿದ್ದಾಗ ಬಲಿದಾನಿ ಮಾಡಿದ, ಯುದ್ಧ ಮತ್ತು ಇತರೆ ಹೋರಾಟದಲ್ಲಿ ಪ್ರಾಣ ಪಣಕ್ಕಿಟ್ಟು ಹೋರಾಡಿದ ವೀರ ಸೈನಿಕರನ್ನು ಸ್ಮರಿಸುವ ಸಲುವಾಗಿ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಬಳಗದ ಪ್ರಕಟಣೆ ತಿಳಿಸಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !