ಮಡಿಕೇರಿ: ‘ಯುವ ಜನರು ಸಮಾಜದ ಆಸ್ತಿಯಾಗಿ ಬೆಳೆಯಬೇಕು’ ಎಂದು ಸರ್ಕಾರಿ ಪದವಿ ಕಾಲೇಜಿನ ಪ್ರಾಂಶುಪಾಲ ವೆಂಕಟೇಶ್ ಪ್ರಸನ್ನ ತಿಳಿಸಿದರು.

ಇಲ್ಲಿನ ಸರ್ಕಾರಿ ಪ್ರಥಮದರ್ಜೆ ಕಾಲೇಜು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ನಿಮ್ಹಾನ್ಸ್ ಸಹಯೋಗದೊಂದಿಗೆ ಕಾಲೇಜಿನ ಸಭಾಂಗಣದಲ್ಲಿ ಬುಧವಾರ ನಡೆದ ‘ಯುವ ಸ್ಪಂದನ ಮತ್ತು ಜೀವನ ಕೌಶಲ್ಯ ಕಾರ್ಯಕ್ರಮ’ದಲ್ಲಿ ಅವರು ಮಾತನಾಡಿದರು.

ಉಪನ್ಯಾಸಕ ಡಾ.ಎಂ.ಎನ್.ಪ್ರಕಾಶ್ ಮಾತನಾಡಿ, ‘ಯುವ ಜನರು ಮಾನಸಿಕ ಒತ್ತಡಕ್ಕೆ ತುತ್ತಾಗದೆ, ತಮ್ಮ ಬುದ್ದಿಮತ್ತೆಯನ್ನು ಹೆಚ್ಚಿಸಿಕೊಳ್ಳಬೇಕು. ಓದಿನ ಕಡೆ ಗಮನಹರಿಸಬೇಕು. ಕಲಿಕೆಯಲ್ಲಿ ಸದಾ ತೀವ್ರತೆ ಇರಬೇಕು. ಆ ನಿಟ್ಟಿನಲ್ಲಿ ಮುನ್ನಡೆಯಬೇಕು’ ಎಂದು ಸಲಹೆ ನೀಡಿದರು.

ಯುವ ಜನತೆಗೆ ಜೀವನ ಕೌಶಲ್ಯ ಮತ್ತು ಮಹತ್ವದ ಕುರಿತು ಮಾಹಿತಿ ನೀಡಲಾಯಿತು. ಬೆಂಗಳೂರಿನ ನಿಮ್ಹಾನ್ಸ್ ಆಸ್ಪತ್ರೆಯ ಕ್ಷೇತ್ರ ಸಂಪರ್ಕ ಅಧಿಕಾರಿ ಆರ್.ನವ್ಯಾ ವಿದ್ಯಾರ್ಥಿಗಳಿಗೆ ಜೀವನ ಕೌಶಲ್ಯದ ಬಗ್ಗೆ ತರಬೇತಿ ನೀಡಿದರು.

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಯುವ ಸಮಾಲೋಚಕಿ ಎಂ.ಎಸ್.ಲಕ್ಷ್ಮಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಯುವಪರಿವರ್ತಕಿ ಎ.ಸಿ.ಚೈತ್ರಾ, ಕಾಲೇಜು ಶಿಕ್ಷಕರು ಹಾಗೂ ಕಾಲೇಜು ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.