ಸೋಮವಾರಪೇಟೆ: ಕೊಡಗು ಜಿಲ್ಲಾ ಪಂಚಾಯಿತಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯಿಂದ ಸೋಮವಾರಪೇಟೆ ವಲಯಮಟ್ಟದ ಕ್ರೀಡಾಕೂಟಕ್ಕೆ ಸಾಂದೀಪನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಚೌಡ್ಲು ಗ್ರಾಮ ಪಂಚಾಯಿತಿ ಸದಸ್ಯ ಎಂ.ಟಿ. ಪರಮೇಶ್ ಈಚೆಗೆ ಚಾಲನೆ ನೀಡಿದರು.
ವೇದಿಕೆಯಲ್ಲಿ ಶಾಲಾ ಆಡಳಿತ ಮಂಡಳಿಯ ಕಾರ್ಯದರ್ಶಿ ಲಿಖಿತ್ ದಾಮೋದರ್, ಚೌಡ್ಲು ಗ್ರಾಮ ಪಂಚಾಯಿತಿಯ ಉಪಾಧ್ಯಕ್ಷ ರಾದ ನತೀಶ್ ಮಂದಣ್ಣ, ಜ್ಯೋತಿ, ತಾಲ್ಲೂಕು ದೈಹಿಕ ಶಿಕ್ಷಣ ಪರಿ ವೀಕ್ಷಕರಾದ ಸುಕುಮಾರಿ, ಸಿ.ಆರ್.ಪಿ ಪ್ರೇಮ ಹಾಗೂ ದೈಹಿಕ ಶಿಕ್ಷಕರಾದ ಎನ್.ಎಂ. ನಾಗೇಶ್, ಕರುಂಬಯ್ಯ ಇದ್ದರು.
ಇದೇ ಸಂದರ್ಭ ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕರಾದ ಆನಂದ್ ಅವರನ್ನು ಸನ್ಮಾನಿಸಲಾಯಿತು.