ಮಂಡ್ಯ: ನ್ಯಾಷನಲ್ ಇನ್ಸಿಟಿಟ್ಯೂಟ್ ಆಫ್ ಟೆಕ್ನಾಲಜಿ ಟೀಚರ್ಸ್ ಟ್ರೈನಿಂಗ್ ರಿಸರ್ಚ್ ಸೆಂಟರ್ ಮತ್ತು ಎಸ್ಎಪಿ ಕ್ಯಾಂಪಸ್ ಸಂಸ್ಥೆ ಪ್ರಕಟಿಸಿರುವ `ಸಂವಿಧಾನ ಆಶಯಗಳು~ ಕೈಪಿಡಿಯಲ್ಲಿ ಡಾ. ಬಿ.ಆರ್.ಅಂಬೇಡ್ಕರ್ `ಸಂವಿಧಾನ ಬರೆದಿಲ್ಲ~ ಎಂಬಂತೆ ಉಲ್ಲೇಖಿಸಿರುವುದನ್ನು ಖಂಡಿಸಿ ದಲಿತ ಸಂಘರ್ಷ ಸಮಿತಿ ಸದಸ್ಯರು ಪ್ರತಿಭಟನೆ ನಡೆಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಶುಕ್ರವಾರ ಪ್ರತಿಭಟನೆ ನಡೆಸಿದ ಕಾರ್ಯಕರ್ತರು, ಕೈಪಿಡಿಯಲ್ಲಿ ತಪ್ಪು ಮಾಹಿತಿ ಮುದ್ರಿಸುವ ಮೂಲಕ ಡಾ. ಬಿ.ಆರ್. ಅಂಬೇಡ್ಕರ್ ಅವರ ಪರಿಶ್ರಮವನ್ನು ಲೇವಡಿ ಮಾಡಲಾಗಿದೆ. ಸಂವಿಧಾನದ ಇತಿಹಾಸವನ್ನು ತಿರುಚಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯ ಪಾಲಿಟೆಕ್ನಿಕ್ ಶಿಕ್ಷಕರಿಗೆ ಸಂವಿಧಾನ ಆಶಯಗಳು ಕುರಿತಂತೆ ತರಬೇತಿ ನೀಡಲು ಪ್ರಕಟಿಸಿದ್ದ, ಈ ಕೈಪಿಡಿಗಳನ್ನು ವಶಕ್ಕೆ ಪಡೆದುಕೊಳ್ಳಬೇಕು ಮತ್ತು ಇಂಥ ತಪ್ಪಿ ಮಾಹಿತಿ ಪ್ರಕಟಿಸಿದವರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು.

ಅಲ್ಲದೆ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಈ ಬಾರಿ ಮಂಡಿಸಲಿರುವ ಬಜೆಟ್ನಲ್ಲಿ ದಲಿತರಿಗೆ ಶೇ 25ರಷ್ಟು ಹಣ ಮೀಸಲಿಡುವ ಕೇಂದ್ರ ಯೋಜನಾ ಆಯೋಗದ ನಿರ್ದೇಶನವನ್ನು ಪಾಲಿಸುವ ರಾಜಕೀಯ ಇಚ್ಛಾಶಕ್ತಿ ಪ್ರದರ್ಶಿಸಬೇಕು ಎಂದು ಆಗ್ರಹಿಸಿದರು.

ದಸಂಸ ಮುಖಂಡರಾದ ವೆಂಕಟಗಿರಿಯಯ್ಯ, ಡಿ.ಕೆ.ಮರಂಕಯ್ಯ, ಮೂರ್ತಿ, ಚಂದ್ರು, ಕರಡಕೆರೆ ಯೋಗೇಶ್ ಮತ್ತಿತರರು ಭಾಗವಹಿಸಿದ್ದರು.

ಪಹಣಿ ಅಂಕಿ ಸಂಖ್ಯೆಗಳು ನೋಂದಣಿಗೆ ಸಲಹೆ
ಪಾಂಡವಪುರ: ರೈತರು ಕೃಷಿ ಅಂಕಿ-ಅಂಶಗಳನ್ನು ಸಮರ್ಪಕವಾಗಿ ಪಹಣಿಯಲ್ಲಿ ದಾಖಲಿಸುವುದರಿಂದ ಸರ್ಕಾರ ಕೃಷಿ ಯೋಜನೆಗಳನ್ನು ಅನುಷ್ಠಾನಗೊಳಿಸಲು ಸಾಧ್ಯವಾಗುತ್ತದೆ ಎಂದು ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ಮಂಗಲ್ದಾಸ್ ಅಭಿಪ್ರಾಯಪಟ್ಟರು.

ಪಟ್ಟಣದ ಟಿಎಪಿಸಿಎಂಎಸ್ ರೈತ ಸಭಾಂಗಣದಲ್ಲಿ ಆರ್ಥಿಕ ಮತ್ತು ಸಾಂಖ್ಯಿಕ ನಿರ್ದೇಶನಾಲಯ ಹಾಗೂ ಕರ್ನಾಟಕ ರಾಜ್ಯ ಕಾರ್ಯತಾಂತ್ರಿಕ ಸಾಂಖ್ಯಿಕ ಅಭಿವೃದ್ಧಿ ಸಂಸ್ಥೆ ವತಿಯಿಂದ ಚುನಾಯಿತ ಪಂಚಾಯತ್ ರಾಜ್ ಪ್ರತಿನಿಧಿಗಳಿಗೆ ಈಚೆಗೆ ಆಯೋಜಿಸಿದ್ದ ಅಂಕಿ- ಅಂಶಗಳ ಮಹತ್ವದ ಅರಿವು ಮೂಡಿಸುವ ತರಬೇತಿ ಕಾರ್ಯಗಾರದಲ್ಲಿ ಅವರು ಮಾತನಾಡಿದರು.

ರೈತರು ಸ್ವಪ್ರೇರಣೆಯಿಂದ ತಮ್ಮ ಜಮೀನಿನಲ್ಲಿ ಬೆಳೆದ ಬೆಳೆಗಳ ವಿವರವನ್ನು ಪಹಣಿಯಲ್ಲಿ ದಾಖಲಿಸಬೇಕು. ಕೃಷಿ ಯೋಜನೆಗಳ ಜತೆಗೆ ವಿವಿಧ ಅಭಿವೃದ್ಧಿ ಯೋಜನೆಗಳನ್ನು ಜಾರಿಗೆಗೊಳಿಸಿ ರೈತರನ್ನು ಪ್ರಗತಿಯತ್ತ ಕೊಂಡೊಯ್ಯಲು ಸುಲಭವಾಗುತ್ತದೆ ಎಂದು ಹೇಳಿದರು.

ಅಧ್ಯಕ್ಷತೆ ವಹಿಸಿದ್ದ ಜಿ.ಪಂ. ಸದಸ್ಯ ಎ.ಎಲ್.ಕೆಂಪೂಗೌಡ ಮಾತನಾಡಿದರು.ತಾ.ಪಂ. ಸದಸ್ಯೆ ಎಸ್.ಎಂ.ಲಕ್ಷ್ಮೀ ಕಾರ್ಯಾಗಾರ ಉದ್ಘಾಟಿಸಿದರು. ಸಂಪನ್ಮೂಲ ವ್ಯಕ್ತಿಗಳಾಗಿ ಅಗಮಿಸಿದ್ದ ಸಹಾಯಕ ಸಾಂಖ್ಯಿಕ ಅಧಿಕಾರಿ ಕೆ.ಪಿ.ಪವನ್, ಸಹಾಯಕ ಕೃಷಿ ನಿರ್ದೇಶಕ ಜಿ.ಎಂ.ಮಹಾದೇವಯ್ಯ ತೋಟ ಗಾರಿಕೆ ಅಧಿಕಾರಿ ಸುರೇಶ್ ಅರೋರ ಅವರು ಸಾಕ್ಷ್ಯಚಿತ್ರಗಳೊಂದಿಗೆ ರೈತರಿಗೆ ಉಪಯುಕ್ತ ಮಾಹಿತಿ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.