ಮಡಿಕೇರಿ: ಕಾಫಿ ಬೆಳೆಗೆ ಸಹಾಯಧನ ನೀಡುವ ನಿಟ್ಟಿನಲ್ಲಿ ಸರ್ಕಾರ ಶೀಘ್ರವೇ ಕ್ರಮ ಕೈಗೊಳ್ಳಲಿದೆ ಎಂದು ವಿಧಾನ ಸಭಾಧ್ಯಕ್ಷ ಕೆ.ಜಿ.ಬೋಪಯ್ಯ ತಿಳಿಸಿದರು.

ಕೊಡಗು ಕಾಫಿ ಬೆಳೆಗಾರರ ಸಹಕಾರ ಸಂಘದ ವತಿಯಿಂದ ಹುಣಸೂರಿನ ಬಿ.ಎಂ.ರಸ್ತೆಯಲ್ಲಿ ವಾಣಿಜ್ಯ ಸಂಕೀರ್ಣ ಮಳಿಗೆಗಳನ್ನು ಗುರುವಾರ ಉದ್ಘಾಟಿಸಿ ಅವರು ಮಾತನಾಡಿದರು.

ಕೊಡಗು ಕಾಫಿ ಬೆಳೆಗಾರರ ಸಂಘವು ಸಂಪನ್ಮೂಲಗಳ ಆದಾಯವನ್ನು ಸಮರ್ಪಕವಾಗಿ ಬಳಸಿಕೊಂಡು ಕಾಫಿ ಬೆಳೆಗಾರರ ಸಹಕಾರ ಸಂಘ ಚೇತರಿಸಿ ಕೊಳ್ಳುವಂತೆ ಮಾಡಬೇಕು ಎಂದರು.

ವೈದ್ಯನಾಥನ್ ವರದಿ ಆಧಾರದ ಮೇಲೆ ರಾಜ್ಯಕ್ಕೆ 700 ಕೋಟಿ ರೂಪಾಯಿ ಬಿಡುಗಡೆಯಾಗಿದ್ದು, ಕೊಡಗು ಜಿಲ್ಲೆಗೆ 5.34 ಕೋಟಿ ರೂಪಾಯಿ ಮಾತ್ರ ಸಿಕ್ಕಿದೆ ಎಂದರು.

ಹುಣಸೂರು ಶಾಸಕ ಎಚ್.ಪಿ.ಮಂಜುನಾಥ ಮಾತನಾಡಿ, ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಸಹಕಾರ ಸಂಘಗಳು ನಾನಾ ಸಮಸ್ಯೆಗಳನ್ನು ಎದುರಿಸುತ್ತಿವೆ. ಸಹಕಾರ ಸಂಘವನ್ನು ಅಭಿವೃದ್ಧಿಯತ್ತ ಕೊಂಡೊಯ್ಯಲು ಗಮನ ನೀಡಬೇಕು ಎಂದು ಅವರು ಹೇಳಿದರು.

ಹುಣಸೂರು ಪುರಸಭಾ ಅಧ್ಯಕ್ಷೆ ಮಂಜುಳಾ ಚೆನ್ನಬಸಪ್ಪ ಅವರು ಮಾತನಾಡಿ, ಕೊಡಗು ಕಾಫಿ ಬೆಳೆಗಾರರ ಸಹಕಾರ ಸಂಘವು ಇಲ್ಲಿನ ಸ್ಥಳೀಯ ಜನರಿಗೆ ಉದ್ಯೋಗ ನೀಡಿ ಆರ್ಥಿಕ ಸಬಲೀಕರಣಕ್ಕೆ ಸಹಕಾರಿ ಯಾಗಿದೆ. ಈ ಸಹಕಾರ ಇನ್ನೂ ಎತ್ತರಕ್ಕೆ ಬೆಳೆಯಲಿ ಎಂದು ಆಶಿಸಿದರು.

ಕೊಡಗು ಕಾಫಿ ಬೆಳೆಗಾರರ ಸಹಕಾರ ಸಂಘದ ಅಧ್ಯಕ್ಷ ಎಂ.ಬಿ.ದೇವಯ್ಯ ಮಾತನಾಡಿ, ಸಂಘವು ಸುಮಾರು 14 ಕೋಟಿ ರೂಪಾಯಿ ನಷ್ಟದಲ್ಲಿದ್ದು, ಜನಪ್ರತಿನಿಧಿಗಳ ಸಹಕಾರದಿಂದ ಸಂಘವನ್ನು ಬಲಪಡಿಸುವ ನಿಟ್ಟಿನಲ್ಲಿ ಶ್ರಮಿಸಲಾಗುತ್ತಿದೆ ಎಂದರು.

ಮೈಸೂರು ಪ್ರಾಂತದ ಸಹಕಾರ ಸಂಘಗಳ ಜಂಟಿ ನಿಬಂಧಕ ಡಾ.ಎಚ್.ಆರ್.ಕೃಷ್ಣಯ್ಯ ಗೌಡ, ಸಹಕಾರ ಸಂಘಗಳ ಉಪನಿಬಂಧಕ ಎಂ.ವೆಂಕಟ ಸ್ವಾಮಿ, ಸಹಕಾರ ಸಂಘಗಳ ಲೆಕ್ಕಪರಿಶೋಧನಾ ಉಪನಿರ್ದೇಶಕ ಎಸ್.ಷಣ್ಮುಖಸ್ವಾಮಿ, ತಹಶೀಲ್ದಾರ್ ಲೋಕನಾಥ್, ಕೊಡಗು ಕಾಫಿ ಬೆಳೆಗಾರರ ಸಂಘದ ನಿರ್ದೇಶಕರಾದ ನಾಯಕಂಡ ಕೆ.ಅಯ್ಯಣ್ಣ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.