ಮಡಿಕೇರಿ: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಸಮುದಾಯಗಳ ಅಭಿವೃದ್ಧಿಗಾಗಿ ಮೀಸಲಿಟ್ಟಿರುವ ಶೇ 22.75ರಷ್ಟು ಹಣದ ಪ್ರಯೋಜನವನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸಬೇಕು ಎಂದು ಜಿಲ್ಲಾಧಿಕಾರಿ ಕೆ.ಎಚ್. ಅಶ್ವತ್ಥನಾರಾಯಣಗೌಡ ಸಂಬಂಧಪಟ್ಟ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಮಂಗಳವಾರ ತಮ್ಮ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಜಾಗೃತಿ ಹಾಗೂ ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ‘ಜಿಲ್ಲೆಯ ಕೆಲವು ಗ್ರಾಮ ಪಂಚಾಯ್ತಿಗಳಲ್ಲಿ ಪರಿಶಿಷ್ಟ ಸಮುದಾಯಗಳಿಗೆ ಮೀಸಲಿಟ್ಟಿರುವ ಅನುದಾನವನ್ನು ಫಲಾನುಭವಿ ಕುಟುಂಬಗಳಿಗೆ ವಿನಿಯೋಗಿಸದೆ, ರಸ್ತೆ ಮತ್ತಿತರ ಕಾಮಗಾರಿಗಳಿಗೆ ಬಳಸಿಕೊಳ್ಳಲಾಗುತ್ತಿದೆ ಎಂಬ ದೂರುಗಳು ಕೇಳಿ ಬರುತ್ತಿವೆ. ಇಂತಹ ಪ್ರಕರಣಗಳು ಕಂಡು ಬಂದಲ್ಲಿ ಸಂಬಂಧಪಟ್ಟ ಅನುಷ್ಠಾನ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕಾಗುತ್ತದೆ’ ಎಂದು ಎಚ್ಚರಿಕೆ ನೀಡಿದರು.

1 ಕೋಟಿ ಬಿಡುಗಡೆ: ಈ ಮಧ್ಯೆ ಜಿಲ್ಲಾ ಕೇಂದ್ರದಲ್ಲಿ ವಾಲ್ಮೀಕಿ ಭವನ ನಿರ್ಮಾಣಕ್ಕಾಗಿ ಸರ್ಕಾರ ಒಂದು ಕೋಟಿ ರೂಪಾಯಿಗಳನ್ನು ಬಿಡುಗಡೆ ಮಾಡಿದೆ. ಆದರೆ, ಮಡಿಕೇರಿಯಲ್ಲಿ ನಿವೇಶನದ್ದೇ ಸಮಸ್ಯೆಯಾಗಿದೆ. ಸೂಕ್ತ ಸ್ಥಳದಲ್ಲಿ ಭವನ ನಿರ್ಮಿಸಲು ನಿವೇಶನಕ್ಕಾಗಿ ಹುಡುಕಾಟ ನಡೆಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿಗಳು ಸಭೆಗೆ ತಿಳಿಸಿದರು.
ಗಿರಿಜನ ಸಮುದಾಯದ ಪ್ರತಿನಿಧಿ ಜೆ.ಪಿ. ರಾಜು ಮಾತನಾಡಿ, ವಿರಾಜಪೇಟೆ ತಾಲ್ಲೂಕಿನಲ್ಲಿ ಗಿರಿಜನ ಸಮುದಾಯ ಹೆಚ್ಚಿನ ಸಂಖ್ಯೆಯಲ್ಲಿದ್ದು, ವಾಲ್ಮೀಕಿ ಭವನವನ್ನು ವಿರಾಜಪೇಟೆ ತಾಲ್ಲೂಕಿನಲ್ಲಿ ನಿರ್ಮಿಸಿದರೆ ಎಲ್ಲರಿಗೂ ಅನುಕೂಲವಾಗಲಿದೆ ಎಂದು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.

ಈ ಬಗ್ಗೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿಗಳು, ಈ ಸಂಬಂಧ ಜನಪ್ರತಿನಿಧಿಗಳೊಂದಿಗೆ ಚರ್ಚಿಸಿದ ನಂತರ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸಭೆಗೆ ತಿಳಿಸಿದರು.
ಜಿಲ್ಲೆಯ ಮೂರು ತಾಲ್ಲೂಕುಗಳಲ್ಲಿ ಅಂಬೇಡ್ಕರ್ ಭವನ ನಿರ್ಮಾಣ ಕಾಮಗಾರಿಯ ಪ್ರಗತಿ ಬಗ್ಗೆ ಜಿಲ್ಲಾಧಿಕಾರಿಗಳು ತಾಲ್ಲೂಕು ಸಮಾಜ ಕಲ್ಯಾಣಾಧಿಕಾರಿಗಳಿಂದ ಮಾಹಿತಿ ಬಯಸಿದರು. ಸೋಮವಾರ ತಾಲ್ಲೂಕು ಸಮಾಜ ಕಲ್ಯಾಣಾಧಿಕಾರಿ ನರಸಿಂಹಮೂರ್ತಿ ಮಾತನಾಡಿ, ತಾಲ್ಲೂಕಿನಲ್ಲಿ ಅಂಬೇಡ್ಕರ್ ಭವನ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದ್ದು, ಹಣ ಹೊಂದಿಸಿ ಪೂರ್ಣಗೊಳಿಸಲು ಕ್ರಮ ವಹಿಸಲಾಗುವುದು ಎಂದರು.

ವಿರಾಜಪೇಟೆ ತಾಲ್ಲೂಕು ಸಮಾಜ ಕಲ್ಯಾಣಾಧಿಕಾರಿ ಚೆನ್ನಯ್ಯ ಮಾತನಾಡಿ, ಸದ್ಯದಲ್ಲಿಯೇ ಅಂಬೇಡ್ಕರ್ ಭವನ ನಿರ್ಮಾಣಕ್ಕೆ ವಿಧಾನಸಭಾ ಅಧ್ಯಕ್ಷ ಕೆ.ಜಿ. ಬೋಪಯ್ಯನವರಿಂದ ಗುದ್ದಲಿ ಪೂಜೆ ನೆರವೇರಿಸಲು ಉದ್ದೇಶಿಸಲಾಗಿದೆ ಎಂದರು.ಹಕ್ಕು ಪತ್ರ ನೀಡಲು ಆಗ್ರಹ: ಕೊಡಗು ಜಿಲ್ಲೆಯಲ್ಲಿ ಅನಾದಿ ಕಾಲದಿಂದಲೂ ಪರಿಶಿಷ್ಟ ಜಾತಿ ಮತ್ತು ಸಮುದಾಯಗಳು ವಾಸ ಮಾಡುತ್ತಿದ್ದು, ಅಂತಹ ಕುಟುಂಬಗಳಿಗೆ ನಿವೇಶನ ಹಕ್ಕುಪತ್ರ ಹಾಗೂ ಜಮೀನುಗಳ ಸಾಗುವಳಿ ಚೀಟಿ ನೀಡಬೇಕು ಎಂದು ಪಳನಿ ಪ್ರಕಾಶ್ ಒತ್ತಾಯಿಸಿದರು.

ಈ ಬಗ್ಗೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿಗಳು, ಪರಿಶಿಷ್ಟ ಸಮುದಾಯಗಳ ವಿವಿಧ ಬೇಡಿಕೆಗಳನ್ನು ಈಡೇರಿಸಲು ಪ್ರಾಮಾಣಿಕ ಪ್ರಯತ್ನ ನಡೆಸಲಾಗುವುದು ಎಂದು ಭರವಸೆ ನೀಡಿದರು.
ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎನ್. ಕೃಷ್ಣಪ್ಪ ಮಾತನಾಡಿ, ಇದೇ ಮಾರ್ಚ್ 5ರಂದು ಬಾಳುಗೋಡು ಏಕಲವ್ಯ ವಸತಿ ಶಾಲೆಯಲ್ಲಿ ವಾಸ್ತವ್ಯ ಹೂಡಿ ಅಲ್ಲಿನ ವ್ಯವಸ್ಥೆಯನ್ನು ಸರಿಪಡಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಂಜುನಾಥ್ ಕೆ. ಅಣ್ಣಿಗೇರಿ ಮಾತನಾಡಿ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಸಮುದಾಯಗಳಿಗೆ ಸಂಬಂಧಿಸಿದಂತೆ ಯಾವುದೇ ದೂರುಗಳು ಬಂದರೂ ತಕ್ಷಣ ಸ್ಪಂದಿಸಲಾಗುವುದು ಎಂದು ಭರವಸೆ ನೀಡಿದರು.

ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ರಾಜೇಶ್ ಜಿ. ಗೌಡ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯ ಅನುಷ್ಠಾನ ವರದಿ ಮಂಡಿಸಿ, ಜಿಲ್ಲೆಯಲ್ಲಿನ ಪರಿಶಿಷ್ಟ ಜಾತಿ ಮತ್ತು ಪಂಗಡ ಸಮುದಾಯಗಳಿಗೆ ಸಿಗಬೇಕಾದ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿದರು.ಮಡಿಕೇರಿ ತಹಶೀಲ್ದಾರ್ ಸೌಮ್ಯಗೌಡ, ಸೋಮವಾರಪೇಟೆ ತಹಶೀಲ್ದಾರ್ ದೇವರಾಜು, ವಿರಾಜಪೇಟೆ ತಹಶೀಲ್ದಾರ್ ಹನುಮಂತರಾಯಪ್ಪ, ಶವ ಸಂಸ್ಕಾರ ಹಣ, ಜಮೀನು ಹಾಗೂ ನಿವೇಶನ ಹಕ್ಕುಪತ್ರಗಳ ವಿತರಣೆ ಬಗ್ಗೆ ಮಾಹಿತಿ ನೀಡಿದರು.

ಪರಿಶಿಷ್ಟ ಸಮುದಾಯದ ಪ್ರತಿನಿಧಿ ಸುಬ್ಬಯ್ಯ ಮಾತನಾಡಿ, ಪರಿಶಿಷ್ಟ ಸಮುದಾಯಗಳಿಗೆ ಸರ್ಕಾರಿ ಸೌಲಭ್ಯಗಳನ್ನು ಸಕಾಲದಲ್ಲಿ ಒದಗಿಸಿಕೊಡಬೇಕು. ಹಾಗೆಯೇ, ಸರ್ಕಾರದ ಯೋಜನೆಗಳ ಬಗ್ಗೆ ಸ್ಥಳೀಯ ಮಟ್ಟದಲ್ಲಿ ಮಾಹಿತಿ ಒದಗಿಸಬೇಕು ಎಂದು ಮನವಿ ಮಾಡಿದರು.ಮಡಿಕೇರಿ ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಪುಟ್ಟಸ್ವಾಮಿ, ನಗರಸಭೆಯ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಸದಾನಂದ, ಜಾಯ್ಸಾ ಮೆನೇಜಸ್, ಪ.ಪಂ. ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.