ಸೋಮವಾರಪೇಟೆ: ಕೃಷಿ ಚಟುವಟಿಕೆಗಾಗಿ ಮಾಡಿದ ಸಾಲವನ್ನು ಸಕಾಲದಲ್ಲಿ ತೀರಿಸಲಾಗದೆ ಬೇಸತ್ತ ರೈತನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಮೀಪದ ಕಿರಗಂದೂರು ಗ್ರಾಮದಲ್ಲಿ ಗುರುವಾರ ರಾತ್ರಿ ನಡೆದಿದೆ.

ಕಿರಗಂದೂರು ಗ್ರಾಮದ ಈರಪ್ಪ (65) ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ರೈತ. ಇವರು ಸ್ಥಳೀಯ ಸಹಕಾರಿ ಬ್ಯಾಂಕ್‌ನಲ್ಲಿ ಸಾಲ ಮಾಡಿದ್ದರು ಎನ್ನಲಾಗಿದೆ. ಗುರುವಾರ ರಾತ್ರಿ ತಮ್ಮ ಮನೆಯಲ್ಲಿ ಈರಪ್ಪ ವಿಷ ಸೇವಿಸಿದ್ದು, ಅಸ್ವಸ್ಥರಾದ ಅವರನ್ನು ಸೋಮವಾರಪೇಟೆಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಯಿತಾದರೂ, ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

ಈರಪ್ಪ ಅವರು ಪತ್ನಿ, ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ಸೋಮವಾರಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.