ಭಾನುವಾರ, ಆಗಸ್ಟ್ 1, 2021
27 °C
ಅಬಕಾರಿ ಸಚಿವ ಎಚ್.ನಾಗೇಶ್ ಹೇಳಿಕೆ

ಮುಳಬಾಗಿಲು | ಗ್ರಾಮಗಳ ಅಭಿವೃದ್ಧಿಗೆ ₹5 ಕೋಟಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮುಳಬಾಗಿಲು: ತಾಲ್ಲೂಕಿನ ಗ್ರಾಮಗಳ ಅಭಿವೃದ್ಧಿಗಾಗಿ ಪಂಚಾಯತ್‌ ರಾಜ್ ಇಲಾಖೆಯಿಂದ ಸರ್ಕಾರ ₹5 ಕೋಟಿ ಬಿಡುಗಡೆ ಮಾಡಿದೆ ಎಂದು ಅಬಕಾರಿ ಸಚಿವ ಎಚ್.ನಾಗೇಶ್ ಹೇಳಿದರು.

ನಗರದ ಶಾಸಕರ ಕಚೇರಿಯಲ್ಲಿ ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಿ ಮಾತನಾಡಿದ ಅವರು, ತಾಲ್ಲೂಕಿನ ಎಲ್ಲ ಗ್ರಾಮಗಳ ರಸ್ತೆ ಅಭಿವೃದ್ಧಿಗಾಗಿ ವಿಶೇಷ ಯೋಜನೆ ರೂಪಿಸಲಾಗಿದೆ. ಎಲ್ಲ ಗ್ರಾಮಗಳಿಗೆ ಬಸ್‌ ಸಂಚಾರ ಕಲ್ಪಿಸುವ ಬಗ್ಗೆ ಚಿಂತನೆ ನಡೆಸಲಾಗಿದೆ ಎಂದು ಹೇಳಿದರು.

ನಗರದ ಸೋಮೇಶ್ವರ ಪಾಳ್ಯಕೆರೆ, ಕೆಂಗುಂಟಿ, ಇಂಡ್ಲುಕೆರೆಗೆ ಕೆ.ಸಿ.ವ್ಯಾಲಿ ನೀರು ಹರಿದು ಬರುವುದರಿಂದ ಆ ಕೆರೆಗಳನ್ನು ಶುಚಿಗೊಳಿಸುವ ಕಾರ್ಯವನ್ನು ಕೆಲವೇ ದಿನಗಳಲ್ಲಿ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ತಾಲ್ಲೂಕಿನ ಎಲ್ಲ ಪುಷ್ಕರಣಿಗಳನ್ನು ನರೇಗಾ ಯೋಜನೆಯಡಿ ಜೀರ್ಣೋದ್ಧಾರ ಗೊಳಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಆದೇಶ ಮಾಡಲಾಗಿದೆ ಎಂದು ತಿಳಿಸಿದರು.

ತಾಲ್ಲೂಕಿನಲ್ಲಿ ಉತ್ತಮ ಮಳೆ ಬಿದ್ದಿರುವುದರಿಂದ ರೈತರಿಗೆ ಅಗತ್ಯವಿರುವ ಬಿತ್ತನೆ ಬೀಜ, ಗೊಬ್ಬರ ಕೃಷಿ ಸಾಮಗ್ರಿಗಳನ್ನು ಸಮರ್ಪಕ ರೀತಿಯಲ್ಲಿ ವಿತರಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಸರ್ಕಾರಿ ಕಚೇರಿಯಲ್ಲಿ ನೀರಿನ ಸಮಸ್ಯೆ ಇದ್ದರೆ ಹೊಸ ಕೊಳವೆಬಾವಿ ಕೊರೆಯಿಸಲಾಗುವುದು ಎಂದರು.

ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಡಾ.ಎ.ವಿ.ಶ್ರೀನಿವಾಸ್, ನಗರಸಭೆ ಆಯುಕ್ತ ಜಿ.ಶ್ರೀನಿವಾಸಮೂರ್ತಿ ಭಾಗವಹಿಸಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು