ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶ್ರೀನಿವಾಸಪುರ: ಗುರುಭವನಕ್ಕೆ ₹ 1.30 ಕೋಟಿ ನಿಗದಿ

ವಿಧಾನ ಪರಿಷತ್‌ ಸದಸ್ಯ ವೈ.ಎ. ನಾರಾಯಣಸ್ವಾಮಿ ಭರವಸೆ
Last Updated 15 ಜನವರಿ 2022, 7:44 IST
ಅಕ್ಷರ ಗಾತ್ರ

ಶ್ರೀನಿವಾಸಪುರ: ‘ಪಟ್ಟಣದಲ್ಲಿ₹ 1.30 ಕೋಟಿ ವೆಚ್ಚದಲ್ಲಿ ಮಾದರಿ ಗುರುಭವನ ನಿರ್ಮಿಸಲಾಗುವುದು. ಇದಕ್ಕೆ ಸರ್ಕಾರ ₹ 1 ಕೋಟಿ ಹಾಗೂ ವಿಧಾನ ಪರಿಷತ್ ಸದಸ್ಯರ ನಿಧಿಯಿಂದ ₹ 30 ಲಕ್ಷ ನೆರವು ನೀಡಲಾಗುವುದು’ ಎಂದು ವಿಧಾನ ಪರಿಷತ್ ಸದಸ್ಯ ವೈ.ಎ. ನಾರಾಯಣಸ್ವಾಮಿಹೇಳಿದರು.

ಪಟ್ಟಣದ ಸರ್ಕಾರಿ ನೌಕರರ ಭವನದಲ್ಲಿ ತಾಲ್ಲೂಕು ಪ್ರಾಥಮಿಕ ಶಿಕ್ಷಕರ ಸಂಘದಿಂದ ಶುಕ್ರವಾರ ಏರ್ಪಡಿಸಿದ್ದ ಸಮಾರಂಭದಲ್ಲಿ ನೂತನ ವರ್ಷದ ಕ್ಯಾಲೆಂಡರ್ ಬಿಡುಗಡೆಗೊಳಿಸಿ ಅವರು ಮಾತನಾಡಿದರು.

ರಾಜ್ಯದಲ್ಲಿ ಸರ್ಕಾರಿ ಶಾಲೆಗಳು ಯಾವುದೇ ಖಾಸಗಿ ಶಾಲೆಗಿಂತ ಕಡಿಮೆ ಇಲ್ಲದಂತೆ ಕಾರ್ಯ ನಿರ್ವಹಿಸುತ್ತಿವೆ. ಮಕ್ಕಳಿಗೆ ಗುಣಾತ್ಮಕ ಶಿಕ್ಷಣ ನೀಡುತ್ತಿವೆ. ಅರ್ಹ ಶಿಕ್ಷಕರು ಬೋಧನೆ ಮಾಡುತ್ತಿದ್ದಾರೆ. ಸರ್ಕಾರ ಶಾಲಾ ಮಕ್ಕಳಿಗೆ ಉತ್ತಮ ಸೌಲಭ್ಯ ನೀಡುತ್ತಿದೆ. ಆದ್ದರಿಂದ ಶಿಕ್ಷಕರು ಇನ್ನಷ್ಟು ಉತ್ಸಾಹದಿಂದ ಬೋಧನೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದು ಹೇಳಿದರು.

ವೆಂಕಟೇಶ್ವರ ಗ್ರಾಮೀಣ ಆರೋಗ್ಯ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ.ವೈ.ವಿ. ವೆಂಕಟಾಚಲಮಾತನಾಡಿದರು.

ತಾಲ್ಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಎಂ. ನಾಗರಾಜ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ವಿ. ಬೈಯ್ಯಾರೆಡ್ಡಿ, ಪದಾಧಿಕಾರಿಗಳಾದ ಸಿ.ವಿ. ಶಿವಣ್ಣ, ಆರ್.ಎನ್. ರೆಡ್ಡಪ್ಪ, ಜಿ.ಎಂ. ಕೋದಂಡಪ್ಪ, ಎನ್. ಆನಂದ್, ಕೆ.ಎಸ್. ಮಂಜುನಾಥರೆಡ್ಡಿ, ಜಿ.ಎಂ. ಚೆನ್ನಪ್ಪ, ಮಂಜುನಾಥ ರೆಡ್ಡಿಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT