ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋಲಾರ ಜಿಲ್ಲೆಯಲ್ಲಿ 100 ಮಂದಿಗೆ ಸೋಂಕು

ಸಾವಿರದ ಗಡಿ ದಾಟಿದ ಸಕ್ರಿಯ ಸೋಂಕಿತರ ಸಂಖ್ಯೆ
Last Updated 10 ಆಗಸ್ಟ್ 2020, 15:58 IST
ಅಕ್ಷರ ಗಾತ್ರ

ಕೋಲಾರ: ಜಿಲ್ಲೆಯಲ್ಲಿ ಹೊಸದಾಗಿ 100 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ಸೋಮವಾರ ದೃಢಪಟ್ಟಿದ್ದು, ಇದರೊಂದಿಗೆ ಸಕ್ರಿಯ ಸೋಂಕಿತರ ಸಾವಿರದ ಗಡಿ ದಾಟಿದೆ.

ವಿಷಮ ಶೀತ ಜ್ವರದಿಂದ ಬಳಲುತ್ತಿರುವವರಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಸೋಂಕು ಕಾಣಿಸಿಕೊಂಡಿದೆ. ಸೋಂಕಿತರ ಸಂಖ್ಯೆಯು ದಾಖಲೆ ಪ್ರಮಾಣದಲ್ಲಿ ಏರಿಕೆಯಾಗಿದ್ದು, ಜಿಲ್ಲೆಯ ಬಹುತೇಕ ಕೋವಿಡ್‌ ಆಸ್ಪತ್ರೆಗಳು ಸೋಂಕಿತರಿಂದ ತುಂಬಿ ಹೋಗಿವೆ.

ಕೋಲಾರ ತಾಲ್ಲೂಕಿನಲ್ಲಿ ಅತಿ ಹೆಚ್ಚು 33 ಮಂದಿಗೆ ಸೋಂಕು ಹರಡಿದೆ. ವಿಷಮ ಶೀತ ಜ್ವರವಿರುವ 25 ಮಂದಿ ಮತ್ತು ಸೋಂಕಿತರ ಸಂಪರ್ಕದಿಂದ 8 ಮಂದಿಗೆ ಸೋಂಕು ಬಂದಿದೆ. ಮಾಲೂರು ತಾಲ್ಲೂಕಿನಲ್ಲಿ ವಿಷಮ ಶೀತ ಜ್ವರದಿಂದ ಬಳಲುತ್ತಿರುವ 10 ಮಂದಿಗೆ ಮತ್ತು ಸೋಂಕಿತರ ಸಂಪರ್ಕದಿಂದ 7 ಮಂದಿಗೆ ಸೋಂಕು ತಗುಲಿದೆ.

ಬಂಗಾರಪೇಟೆ ತಾಲ್ಲೂಕಿನಲ್ಲಿ ವಿಷಮ ಶೀತ ಜ್ವರಕ್ಕೆ ತುತ್ತಾಗಿರುವ 19 ಮಂದಿಯಲ್ಲಿ, ಸೋಂಕಿತರ ಸಂಪರ್ಕಕ್ಕೆ ಬಂದ 3 ಮಂದಿಯಲ್ಲಿ ಮತ್ತು ಹೊರ ಜಿಲ್ಲೆಗೆ ಹೋಗಿ ಬಂದಿದ್ದ ಒಬ್ಬರಲ್ಲಿ ಸೋಂಕು ಕಾಣಿಸಿಕೊಂಡಿದೆ. ಕೆಜಿಎಫ್‌ ತಾಲ್ಲೂಕಿನಲ್ಲಿ ವಿಷಮ ಶೀತ ಜ್ವರವಿರುವ 5 ಮಂದಿಗೆ, ಸೋಂಕಿತರ ಸಂಪರ್ಕದಿಂದ ಇಬ್ಬರಿಗೆ ಮತ್ತು ಹೊರ ಜಿಲ್ಲೆಗೆ ಹೋಗಿದ್ದ ಒಬ್ಬರಿಗೆ ಸೋಂಕು ಬಂದಿರುವುದು ಗೊತ್ತಾಗಿದೆ.

ಮುಳಬಾಗಿಲು ತಾಲ್ಲೂಕಿನಲ್ಲಿ 12 ಮಂದಿಗೆ ಸೋಂಕು ತಗುಲಿದ್ದು, ಇವರೆಲ್ಲರೂ ವಿಷಮ ಶೀತ ಜ್ವರದಿಂದ ಬಳಲುತ್ತಿದ್ದಾರೆ. ಶ್ರೀನಿವಾಸಪುರ ತಾಲ್ಲೂಕಿನಲ್ಲಿ ಸೋಂಕಿತರ ಸಂಪರ್ಕದಿಂದ 5 ಮಂದಿಗೆ ಮತ್ತು ವಿಷಮ ಶೀತ ಜ್ವರದಿಂದ ಬಳಲುತ್ತಿರುವ ಇಬ್ಬರಿಗೆ ಸೋಂಕು ಹರಡಿದೆ.

ಸೋಂಕಿತರ ಮನೆ ಹಾಗೂ ಸುತ್ತಮುತ್ತಲ ಪ್ರದೇಶವನ್ನು ಸೀಲ್‌ಡೌನ್‌ ಮಾಡಲಾಗಿದೆ. ಸುರಕ್ಷತಾ ಕ್ರಮವಾಗಿ ಇಡೀ ಪ್ರದೇಶದಲ್ಲಿ ಸೋಂಕು ನಿವಾರಕ ದ್ರಾವಣ ಸಿಂಪಡಿಸಲಾಗಿದೆ. ಸೋಂಕಿತರ ಸಂಪರ್ಕಕ್ಕೆ ಬಂದ ವ್ಯಕ್ತಿಗಳನ್ನು ಕ್ವಾರಂಟೈನ್‌ ಮಾಡಲಾಗಿದೆ.

32 ಮಂದಿ ಗುಣಮುಖ: ಜಿಲ್ಲಾ ಕೇಂದ್ರದ ಕೋವಿಡ್‌ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸೋಂಕಿತರ ಪೈಕಿ 32 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಸೋಮವಾರ ಮನೆಗೆ ಮರಳಿದರು. ಕೋಲಾರ ತಾಲ್ಲೂಕಿನ 10 ಮಂದಿ, ಕೆಜಿಎಫ್‌ ಮತ್ತು ಶ್ರೀನಿವಾಸಪುರ ತಾಲ್ಲೂಕಿನ ತಲಾ ಮೂವರು, ಮಾಲೂರು ಹಾಗೂ ಮುಳಬಾಗಿಲು ತಾಲ್ಲೂಕಿನ ತಲಾ 4 ಮಂದಿ, ಬಂಗಾರಪೇಟೆ ತಾಲ್ಲೂಕಿನ 8 ಮಂದಿಯನ್ನು ಮನೆಗೆ ಕಳುಹಿಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT