ಸೋಮವಾರ, 20 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಂಗಾರಪೇಟೆ | ಎಟಿಎಂನಿಂದ ₹15 ಲಕ್ಷ ದರೋಡೆ

ಗ್ಯಾಸ್ ಕಟರ್‌ನಿಂದ ಯಂತ್ರ ಕೊರೆದ ಕಳ್ಳರು
Published 24 ಜುಲೈ 2023, 5:16 IST
Last Updated 24 ಜುಲೈ 2023, 5:16 IST
ಅಕ್ಷರ ಗಾತ್ರ

ಬಂಗಾರಪೇಟೆ: ಕೋಲಾರ-ಬಂಗಾರಪೇಟೆ ಮುಖ್ಯರಸ್ತೆಯ ಹಂಚಾಳ ಗೇಟ್ ಬಳಿ ಶನಿವಾರ ರಾತ್ರಿ ಗ್ಯಾಸ್ ಕಟ್ಟರ್ ಬಳಸಿ ಕೆನರಾ ಬ್ಯಾಂಕ್ ಎಟಿಎಂನಲ್ಲಿದ್ದ ₹15 ಲಕ್ಷ ಹಣ ದೋಚಲಾಗಿದೆ.

ಡೆಕ್ಕನ್ ಹೈಡ್ರಾಲಿಕ್ಸ್ ಸಂಸ್ಥೆಗೆ ಸೇರಿದ ವಾಣಿಜ್ಯ ಮಳಿಗೆಯಲ್ಲಿ ಸಿಸಿಟಿವಿ ಕ್ಯಾಮೆರಾ ಅಳವಡಿಸಿಲ್ಲ. ಕಟ್ಟಡ ಮಾಲೀಕರಿಗೆ ನೋಟಿಸ್ ನೀಡಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಶಾಸಕ ಎಸ್.ಎನ್.ನಾರಾಯಣಸ್ವಾಮಿ ಭೇಟಿ ನೀಡಿ ಪೊಲೀಸರಿಂದ ಮಾಹಿತಿ ಪಡೆದರು. ಆರೋಪಿಗಳನ್ನು ಪತ್ತೆಹಚ್ಚುವಂತೆ ಸೂಚಿಸಿದರು. ಕೆಜಿಎಫ್ ಡಿವೈಎಸ್ಪಿ ರಮೇಶ್, ಇನ್‌ಸ್ಪೆಕ್ಟರ್ ಸಂಜೀವರಾಯಪ್ಪ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಬೆರಳಚ್ಚು ತಂಡ ಹಾಗೂ ಶ್ವಾನದಳ ತಂಡದಿಂದ ಶೋಧ ಕಾರ್ಯ ನಡೆಯುತ್ತಿದೆ. ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT