ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋಲಾರ: ಒಬ್ಬ ಎಸ್ಎಸ್ಎಲ್‌ಸಿ ಅಂಧ ವಿದ್ಯಾರ್ಥಿಗೆ 20 ಸಿಬ್ಬಂದಿ

Last Updated 26 ಜೂನ್ 2020, 15:51 IST
ಅಕ್ಷರ ಗಾತ್ರ

ಕೋಲಾರ: ನಗರದ ಸರ್ಕಾರಿ ಬಾಲಕರ ಜೂನಿಯರ್ ಕಾಲೇಜಿನ ಎಸ್ಸೆಸ್ಸೆಲ್ಸಿ ಪರೀಕ್ಷಾ ಕೇಂದ್ರದಲ್ಲಿ ಶುಕ್ರವಾರ ಅರ್ಥಶಾಸ್ತ್ರ ವಿಷಯದ ಪರೀಕ್ಷೆ ಬರೆದ ಒಬ್ಬ ಅಂಧ ವಿದ್ಯಾರ್ಥಿಗೆ 20 ಮಂದಿ ಸಿಬ್ಬಂದಿ ಕರ್ತವ್ಯ ನಿರ್ವಹಿಸಿದರು.

ಈ ಒಂದು ಕೇಂದ್ರದಲ್ಲಿ ಮಾತ್ರ ನಡೆದ ಅರ್ಥಶಾಸ್ತ್ರ ಪರೀಕ್ಷೆಗೆ ಒಬ್ಬನೇ ವಿದ್ಯಾರ್ಥಿ ಹಾಜರಾದ. ಇಡೀ ಜಿಲ್ಲೆಯಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಖಾಸಗಿಯಾಗಿ ಹೆಸರು ನೋಂದಾಯಿಸಿದ್ದ ಈ ಏಕೈಕ ಅಂಧ ವಿದ್ಯಾರ್ಥಿಗೆ ಸಹಾಯಕನ ನೆರವಿನಿಂದ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಯಿತು.

ಪರೀಕ್ಷಾ ಕೇಂದ್ರಕ್ಕೆ ಒಬ್ಬರು ಮುಖ್ಯ ಅಧೀಕ್ಷಕರು, ಪ್ರಶ್ನೆಪತ್ರಿಕೆ ಪಾಲಕರು, ಖಜಾನೆಯಿಂದ ಪ್ರಶ್ನೆಪತ್ರಿಕೆ ತರುವ ಮಾರ್ಗಾಧಿಕಾರಿ ಸಿಬ್ಬಂದಿ, ಪೊಲೀಸ್ ಕಾನ್‌ಸ್ಟೆಬಲ್‌, ಕೊಠಡಿ ಮೇಲ್ವಿಚಾರಕರು, ಜಾಗೃತ ದಳದ ತಂಡ ಸಹಾಯಕರು ಸೇರಿದಂತೆ ಒಟ್ಟು 20 ಮಂದಿ ಪರೀಕ್ಷಾ ಕಾರ್ಯ ನಿರ್ವಹಿಸಿದ್ದು ವಿಶೇಷವಾಗಿತ್ತು.

‘ಅಂಧ ವಿದ್ಯಾರ್ಥಿಗಳಿಗೆ ಗಣಿತ ಮತ್ತು ವಿಜ್ಞಾನ ವಿಷಯದ ಬದಲಿಗೆ ಅರ್ಥಶಾಸ್ತ್ರ ಅಥವಾ ರಾಜ್ಯಶಾಸ್ತ್ರ ವಿಷಯ ಆಯ್ಕೆ ಮಾಡಿಕೊಂಡು ಪರೀಕ್ಷೆ ಬರೆಯಲು ಅವಕಾಶವಿದೆ. ಜಿಲ್ಲೆಯಲ್ಲಿ ಖಾಸಗಿಯಾಗಿ ಹೆಸರು ನೊಂದಾಯಿಸಿದ್ದ ಏಕೈಕ ವಿದ್ಯಾರ್ಥಿ ಅರ್ಥಶಾಸ್ತ್ರ ವಿಷಯ ಆಯ್ಕೆ ಮಾಡಿಕೊಂಡು ಪರೀಕ್ಷೆ ಬರೆದರು’ ಎಂದು ಎಸ್ಸೆಸ್ಸೆಲ್ಸಿ ಜಿಲ್ಲಾ ಪರೀಕ್ಷಾ ನೋಡಲ್ ಅಧಿಕಾರಿ ಎ.ಎನ್.ನಾಗೇಂದ್ರಪ್ರಸಾದ್ ‘ಪ್ರಜಾವಾಣಿ’ಗೆ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT