ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

11 ರಿಂದ 2ನೇ ಸುತ್ತಿನ ಮಿಷನ್ ಇಂಧ್ರಧನುಷ್‌

ಶೇ 100ರಷ್ಟು ಪ್ರಗತಿ ಸಾಧಿಸಲು ಜಿಲ್ಲಾಧಿಕಾರಿ ಅಕ್ರಂ ಪಾಷ ಸೂಚನೆ
Published 7 ಸೆಪ್ಟೆಂಬರ್ 2023, 17:14 IST
Last Updated 7 ಸೆಪ್ಟೆಂಬರ್ 2023, 17:14 IST
ಅಕ್ಷರ ಗಾತ್ರ

ಕೋಲಾರ: ‘ಆರೋಗ್ಯ ಇಲಾಖೆಯಿಂದ ಸೆ. 11 ರಿಂದ 16 ರ ವರೆಗೆ 2ನೇ ಸುತ್ತಿನ ಮಿಷನ್ ಇಂಧ್ರಧನುಷ್‌ ಲಸಿಕಾ ಅಭಿಯಾನವನ್ನು ಯಶಸ್ವಿಯಾಗಿ ನಡೆಸಲು ಅಧಿಕಾರಿಗಳು ಸಮನ್ವಯತೆಯಿಂದ ಕೆಲಸ ಮಾಡಬೇಕು’ ಎಂದು ಜಿಲ್ಲಾಧಿಕಾರಿ ಅಕ್ರಂ ಪಾಷ ಹೇಳಿದರು.

ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಗುರುವಾರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ತೀವ್ರವಾದ ಮಿಷನ್ ಇಂದ್ರಧನುಷ್‌ 5.0 ಕಾರ್ಯಕ್ರಮದ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಪೂರ್ವಸಿದ್ಧತೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

‘ವಯಸ್ಸಿಗನುಗುಣವಾಗಿ ಲಸಿಕೆ ಪಡೆಯದೆ ಬಿಟ್ಟು ಹೋದ, ವಂಚಿತರದ ಮತ್ತು ಲಸಿಕ ಕಾರಣಕ್ಕೆ ಬಾಕಿ ಇರುವ ಗರ್ಭಿಣಿಯರು ಹಾಗೂ ಐದು ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ತೀವ್ರವಾದ ಮಿಷನ್ ಇಂದ್ರಧನುಷ್ 5.0 ಕಾರ್ಯಕ್ರಮದಲ್ಲಿ ಗಮನ ಹರಿಸಲಾಗುವುದು. ವಿಶೇಷವಾಗಿ ದಡಾರ ರುಬೇಲ ರೋಗ ನಿರೋಧಕತೆಯ ಅಂತರವನ್ನು ಕಡಿಮೆ ಮಾಡುವ ಉದ್ದೇಶ ಹೊಂದಲಾಗಿದೆ. ಈ ‌ಕಾರ್ಯಕ್ರಮ ಸಮರ್ಪಕವಾಗಿ ತಲುಪುವಂತೆ ನೋಡಿಕೊಳ್ಳಬೇಕು’ ಎಂದು ಸೂಚಿಸಿದರು.

‘ಎರಡನೇ ಸುತ್ತಿನ ಲಸಿಕಾ ಕಾರ್ಯಕ್ರಮದಲ್ಲಿ ಯಾವುದೇ ಮಗು ಲಸಿಕೆಯಿಂದ ವಂಚಿತರಾಗದಂತೆ ನೋಡಿಕೊಳ್ಳಬೇಕು. ಈ ವಿಶೇಷ ಲಸಿಕೆಯ ಹಾಕಿಸಲು ಹಿಂದೇಟು ಹಾಕುವ ಫಲಾನುಭವಿಗಳ ಮನವೊಲಿಸಬೇಕು’ ಎಂದು ತಿಳಿಸಿದರು

‘ಇಂದ್ರಧನುಷ್‌ ಕಾರ್ಯಕ್ರಮದಲ್ಲಿ ಧನುರ್ವಾಯು, ದಡಾರ, ನಾಯಿ ಕೆಮ್ಮು, ಕ್ಷಯ, ಕಮಾಲೆ ಮತ್ತು ಪೋಲಿಯೊ ವಿರುದ್ಧ ಲಸಿಕೆ ಹಾಕಲು ಇಂದ್ರಧನುಷ್‌ ಲಸಿಕಾ ಕೇಂದ್ರ ಹಾಗೂ ತಂಡ ರಚಿಸಲಾಗಿದೆ’ ಎಂದು ಹೇಳಿದರು.

‘ಇಲಾಖೆಯ ಸಿಬ್ಬಂದಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳು, ಮೇಲ್ವಿಚಾರಕರು, ಅಂಗನವಾಡಿ ಕಾರ್ಯಕರ್ತರು ಈ ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಪಾಲ್ಗೊಂಡು ನೂರಕ್ಕೆ ನೂರರಷ್ಟು ಪ್ರಗತಿ ಸಾಧಿಸಬೇಕು’ ಎಂದು ತಿಳಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಸಿಇಒ ಪದ್ಮಾ ಬಸವಂತಪ್ಪ, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಜಗದೀಶ್, ಎಸ್‌ಎನ್‌ಆರ್‌ ಆಸ್ಪತ್ರೆಯ ಡಾ.ವಿಜಯಕುಮಾರ್‌, ಆರೋಗ್ಯ ಇಲಾಖೆಗೆ ಸಂಬಂಧಿಸಿದ ಎಲ್ಲಾ ಅಧಿಕಾರಿಗಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT