ಭಾನುವಾರ, ಸೆಪ್ಟೆಂಬರ್ 25, 2022
22 °C

ಕೋಲಾರದಲ್ಲಿ 3.5 ಸೆ.ಮೀ ಮಳೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕೋಲಾರ: ನಗರ ಹಾಗೂ ಜಿಲ್ಲೆಯ ವಿವಿಧೆಡೆ ಬುಧವಾರ ಸಂಜೆ ಬಿರುಸಿನ ಮಳೆಯಾಗಿದೆ.

ಸಂಜೆವರೆಗೆ ನಗರದಲ್ಲಿ ಬಿಸಿಲಿನ ವಾತಾವರಣವಿತ್ತು. 5 ಗಂಟೆ ಸುಮಾರಿಗೆ ಆರಂಭವಾದ ಮಳೆ ತಡರಾತ್ರಿಯವರೆಗೆ ಸುರಿಯುತ್ತಲೇ ಇತ್ತು. ಕೋಲಾರ ನಗರದಲ್ಲಿ ರಾತ್ರಿ 8ರ ಸುಮಾರಿಗೆ 3.5 ಸೆ.ಮೀ ಮಳೆಯಾಗಿತ್ತು.

ರಸ್ತೆ ಗುಂಡಿ ಹಾಗೂ ತಗ್ಗು ಪ್ರದೇಶಗಳಲ್ಲಿ ನೀರು ತುಂಬಿಕೊಂಡಿತ್ತು. ವಿದ್ಯುತ್‌ ವ್ಯತ್ಯಯ ಉಂಟಾಗಿತ್ತು.

ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮಾಹಿತಿ ಪ್ರಕಾರ ಜಿಲ್ಲೆಯಲ್ಲಿ ಜನವರಿಯಿಂದ ಜುಲೈ 26ರ ವರೆಗೆ 48.07 ಸೆ.ಮೀ ಮಳೆಯಾಗಿದೆ. ಈ ಅವಧಿಯ ವಾಡಿಕೆ ಮಳೆ 24.04 ಸೆ.ಮೀ. ಶೇ 100ರಷ್ಟು ಮಳೆ ಪ್ರಮಾಣ ಈ ಬಾರಿ ಹೆಚ್ಚಾಗಿದೆ. ಈಗಾಗಲೇ ಜಿಲ್ಲೆಯ ಕೆರೆ, ಕಟ್ಟೆ ಹಾಗೂ ಕಾಲುವೆಗಳು ತುಂಬಿಕೊಂಡಿವೆ.

ಬಿತ್ತನೆ ಚುರುಕಾಗಿದ್ದ ಸಮಯದಲ್ಲಿ ಮಳೆ ಆಗಲಿಲ್ಲ. ಇದರಿಂದ ಜಿಲ್ಲೆಯಲ್ಲಿ ಬಿತ್ತನೆ ಪ್ರಮಾಣ ಕುಂಠಿತಗೊಂಡಿದೆ. ರಾಗಿ ಬಿತ್ತನೆ ಕಾರ್ಯ ಮಾತ್ರ ಆಗಸ್ಟ್‌ ಅಂತ್ಯದವರೆಗೆ ನಡೆಯಲಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು