ಕೋಲಾರ: ‘ಜಿಲ್ಲೆಯಲ್ಲಿ ಒಟ್ಟು 2,180 ಅಂಗನವಾಡಿಗಳು ಕಾರ್ಯನಿರ್ವಹಿಸುತ್ತಿವೆ. ಅದರಲ್ಲಿ ಬಾಡಿಗೆ ಕಟ್ಟಡದಲ್ಲಿ 462 ಅಂಗನವಾಡಿಗಳಿವೆ. ಹೀಗಾಗಿ, ಬಾಕಿ ಇರುವ ಕಟ್ಟಡ ನಿರ್ಮಾಣ ಕಾಮಗಾರಿಯನ್ನು ಬೇಗನೇ ಪೂರ್ಣಗೊಳಿಸಿ’ ಎಂದು ಜಿಲ್ಲಾಧಿಕಾರಿ ಅಕ್ರಂ ಪಾಷ ಹೇಳಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ನಗರ ಮತ್ತು ಗ್ರಾಮೀಣ ಪ್ರದೇಶಗಳ ವ್ಯಾಪ್ತಿಯಲ್ಲಿ ಹೊಸ ಅಂಗನವಾಡಿ ಕಟ್ಟಡ ನಿರ್ಮಾಣ ನಿವೇಶನ ಲಭ್ಯತೆ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ತಾಲ್ಲೂಕುವಾರು ನಿವೇಶನ, ಕಟ್ಟಡ ಇರುವ ಹಾಗೂ ಇಲ್ಲದೆ ಇರುವ ಅಂಗನವಾಡಿ ಕೇಂದ್ರಗಳ ಬಗ್ಗೆ ಮಾಹಿತಿ ಪಡೆದರು.

‘ತಮ್ಮ ಶಾಲಾ ವ್ಯಾಪ್ತಿಯಲ್ಲಿ ಇರುವ ಅಂಗನವಾಡಿ ಕಟ್ಟಡಗಳ ಬಗ್ಗೆ ಶಿಕ್ಷಣ ಇಲಾಖೆಯವರ ಜೊತೆ ಮಾತನಾಡಿ ತಮ್ಮ ಹಂತದಲ್ಲಿಯೇ ಸಮಸ್ಯೆಯನ್ನು ಬಗೆಹರಿಸಿಕೊಳ್ಳಿ’ ಎಂದರು.

‘ನಗರ ಪ್ರದೇಶ ವ್ಯಾಪ್ತಿಯಲ್ಲಿ ಸಂಬಂಧಪಟ್ಟ ಅಧಿಕಾರಿಗಳ ಜೊತೆ ಮಾತನಾಡಿ ಹೊಸ ಕಟ್ಟಡ ನಿರ್ಮಾಣ ಮಾಡುವುದಕ್ಕೆ ಖಾಲಿ ಸ್ಥಳವನ್ನು ನೀಡುವಂತೆ ಹಾಗೂ ಕಟ್ಟಡ ಕಾಮಗಾರಿಗಳು ಪೂರ್ಣಗೊಂಡಿರುವ ಹೊಸ ಕಟ್ಟಡಗಳನ್ನು ಸಂಬಂಧಪಟ್ಟ ಅಧಿಕಾರಿಗಳಿಗೆ ಹಸ್ತಾಂತರಿಸಲು’ ಸೂಚನೆ ನೀಡಿದರು.

‘ಜಿಲ್ಲೆಯಲ್ಲಿ ಶಾಸಕರು ಹಾಗೂ ಸಂಸದರ ಅನುದಾನದಲ್ಲಿ ನಿರ್ಮಾಣವಾಗಿರುವ ಸಮುದಾಯ ಭವನಗಳ ಪಟ್ಟಿ ಮಾಡಿ ಮುಂದಿನ ಸಭೆಗೆ ಬರುವ ಮುನ್ನ ವರದಿಯನ್ನು ಸಲ್ಲಿಸಬೇಕು’ ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶಿಸಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಸಿಇಒ ಪದ್ಮಾ ಬಸವಂತಪ್ಪ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕ ವಂಶಿಕೃಷ್ಣ, ಡಿಡಿಪಿಐ ಕೃಷ್ಣಮೂರ್ತಿ, ಕೃಷಿ ಇಲಾಖೆಯ ಜಂಟಿ ನಿರ್ದೇಶಕಿ ಸುಮಾ, ಜಿಲ್ಲೆಯ ಎಲ್ಲಾ ತಾಲ್ಲೂಕುಗಳ ಇ ಗಳು, ಸಿಡಿಪಿಒಗಳು, ನಗರಸಭೆ ಹಾಗೂ ಪುರಸಭೆಯ ಅಧಿಕಾರಿಗಳು ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.