ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮತ್ತೆ 48 ಮಂದಿಗೆ ಕೊರೊನಾ ಸೋಂಕು

Last Updated 23 ಸೆಪ್ಟೆಂಬರ್ 2020, 16:41 IST
ಅಕ್ಷರ ಗಾತ್ರ

ಕೋಲಾರ: ಜಿಲ್ಲೆಯಲ್ಲಿ ಹೊಸದಾಗಿ 48 ಮಂದಿಗೆ ಕೊರೊನಾ ಸೋಂಕು ಹರಡಿರುವುದು ಬುಧವಾರ ದೃಢಪಟ್ಟಿದ್ದು, ಸಕ್ರಿಯ ಸೋಂಕಿತರ ಸಂಖ್ಯೆ 783ಕ್ಕೆ ಏರಿಕೆಯಾಗಿದೆ.

ಮುಖ್ಯವಾಗಿ ಸೋಂಕಿತರ ಸಂಪರ್ಕದಿಂದ ಹೆಚ್ಚಿನ ಮಂದಿಗೆ ಸೋಂಕು ತಗುಲಿದೆ. ಮಾಲೂರು ತಾಲ್ಲೂಕಿನಲ್ಲಿ ಅತಿ ಹೆಚ್ಚು 16 ಮಂದಿಗೆ ಸೋಂಕು ಹರಡಿರುವುದು ಖಚಿತವಾಗಿದೆ. ಸೋಂಕಿತರ ಸಂಪರ್ಕದಿಂದ 14 ಮಂದಿಗೆ ವಿಷಮ ಶೀತ ಜ್ವರವಿರುವ ಒಬ್ಬರಿಗೆ ಮತ್ತು ತೀವ್ರ ಉಸಿರಾಟ ಸಮಸ್ಯೆಯಿಂದ ಬಳಲುತ್ತಿರುವ ಒಬ್ಬರಿಗೆ ಸೋಂಕು ಬಂದಿದೆ.

ಕೋಲಾರ ತಾಲ್ಲೂಕಿನಲ್ಲಿ ವಿಷಮ ಶೀತ ಜ್ವರಕ್ಕೆ ತುತ್ತಾಗಿರುವ 12 ಮಂದಿಗೆ, ಸೋಂಕಿತರ ಸಂಪರ್ಕದಿಂದ ಒಬ್ಬರಿಗೆ ಮತ್ತು ಆರೋಗ್ಯ ಕಾರ್ಯಕರ್ತರೊಬ್ಬರಿಗೆ ಸೋಂಕು ಹರಡಿದೆ. ಕೆಜಿಎಫ್‌ ತಾಲ್ಲೂಕಿನಲ್ಲಿ ಸೋಂಕಿತರ ಸಂಪರ್ಕದಿಂದ 10 ಮಂದಿಗೆ ಸೋಂಕು ತಗುಲಿರುವುದು ಗೊತ್ತಾಗಿದೆ.

ಬಂಗಾರಪೇಟೆ ತಾಲ್ಲೂಕಿನಲ್ಲಿ 5 ಮಂದಿಗೆ ಮತ್ತು ಶ್ರೀನಿವಾಸಪುರ ತಾಲ್ಲೂಕಿನಲ್ಲಿ 3 ಮಂದಿಗೆ ಸೋಂಕು ಬಂದಿದೆ. ಇವರೆಲ್ಲರೂ ವಿಷಮ ಶೀತ ಜ್ವರದಿಂದ ಬಳಲುತ್ತಿದ್ದಾರೆ. ಸೋಂಕಿತರ ಮನೆ ಹಾಗೂ ಸುತ್ತಮುತ್ತಲ ಪ್ರದೇಶದಲ್ಲಿ ಸೋಂಕು ನಿವಾರಕ ದ್ರಾವಣ ಸಿಂಪಡಿಸಲಾಗಿದೆ. ಸೋಂಕಿತರ ಸಂಪರ್ಕಕ್ಕೆ ಬಂದ ವ್ಯಕ್ತಿಗಳನ್ನು ಪತ್ತೆ ಹಚ್ಚಿ ಕ್ವಾರಂಟೈನ್‌ ಮಾಡಲಾಗಿದೆ.

30 ಮಂದಿ ಗುಣಮುಖ: ಕೋವಿಡ್‌ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸೋಂಕಿತರ ಪೈಕಿ 30 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬುಧವಾರ ಮನೆಗೆ ಮರಳಿದರು. ಕೋಲಾರ ತಾಲ್ಲೂಕಿನ 19 ಮಂದಿ, ಮಾಲೂರು ತಾಲ್ಲೂಕಿನ 6, ಬಂಗಾರಪೇಟೆ ತಾಲ್ಲೂಕಿನ 3, ಕೆಜಿಎಫ್‌ ಮತ್ತು ಮುಳಬಾಗಿಲು ತಾಲ್ಲೂಕಿನ ತಲಾ ಒಬ್ಬರನ್ನು ಆಸ್ಪತ್ರೆಯಿಂದ ಬೀಳ್ಕೊಡಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT