ಶನಿವಾರ, ಆಗಸ್ಟ್ 13, 2022
23 °C

49 ನಾಮಪತ್ರ ತಿರಸ್ಕೃತ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೆಜಿಎಫ್‌: ತಾಲ್ಲೂಕಿನ 16 ಗ್ರಾಮ ಪಂಚಾಯಿತಿಯ 293 ಸ್ಥಾನಗಳಿಗೆ ನಡೆಯಲಿರುವ ಚುನಾವಣೆಯಲ್ಲಿ ಒಟ್ಟು 1127 ನಾಮಪತ್ರಗಳು ಸಲ್ಲಿಕೆಯಾಗಿದ್ದು, 49 ನಾಮಪತ್ರಗಳು ತಿರಸ್ಕೃತಗೊಂಡಿವೆ.

ಘಟ್ಟಕಾಮಧೇನಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ 61 ನಾಮಪತ್ರಗಳು ಸಲ್ಲಿಕೆಯಾಗಿದ್ದು, ಅವುಗಳ ಪೈಕಿ 15 ನಾಮಪತ್ರಗಳು ತಿರಸ್ಕೃತಗೊಂಡಿದೆ. ಎನ್‌.ಜಿ.ಹುಲ್ಕೂರು ಗ್ರಾಮ ಪಂಚಾಯಿತಿಯಲ್ಲಿ 13, ಬೇತಮಂಗಲದಲ್ಲಿ 1, ಕಮ್ಮಸಂದ್ರದಲ್ಲಿ 3, ಕಂಗಾಂಡ್ಲಹಳ್ಳಿಯಲ್ಲಿ 6, ಪಾರಾಂಡಹಳ್ಳಿಯಲ್ಲಿ 2 ನಾಮಪತ್ರಗಳು ತಿರಸ್ಕೃತವಾಗಿದೆ.

ಟಿ.ಗೊಲ್ಲಹಳ್ಳಿ, ಹುಲ್ಕೂರು, ವೆಂಗಸಂದ್ರ, ರಾಮಸಾಗರ, ಕ್ಯಾಸಂಬಳ್ಳಿ, ಮಾರಿಕುಪ್ಪ, ಜಕ್ಕರಸನಕುಪ್ಪ, ಶ್ರೀನಿವಾಸಸಂದ್ರ ಮತ್ತು ಘಟ್ಟಮಾದಮಂಗಲ ಗ್ರಾಮ ಪಂಚಾಯಿತಿಗಳಲ್ಲಿ ಯಾವುದೇ ನಾಮಪತ್ರ ತಿರಸ್ಕೃತಗೊಂಡಿಲ್ಲ ಎಂದು ತಹಶೀಲ್ದಾರ್ ಕೆ.ಎನ್‌. ಸುಜಾತ ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.