ಶುಕ್ರವಾರ, ಜುಲೈ 1, 2022
23 °C
₹ 1.50 ಕೋಟಿ ವೆಚ್ಚದಲ್ಲಿ ನಿರ್ಮಾಣ: ಶಾಸಕ ಕೆ.ವೈ. ನಂಜೇಗೌಡ ಹೇಳಿಕೆ

50 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆ: ಶಾಸಕ ಕೆ.ವೈ. ನಂಜೇಗೌಡ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮಾಲೂರು: ಕೋವಿಡ್ ಮೂರನೇ ಅಲೆಯ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆಯಾಗಿ ಪಟ್ಟಣದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆ ಮೇಲ್ಭಾಗದಲ್ಲಿ ಸುಮಾರು ₹ 1.50 ಕೋಟಿ ವೆಚ್ಚದಲ್ಲಿ ದಾನಿಗಳ ಸಹಕಾರದಡಿ ಸುಸಜ್ಜಿತವಾದ ಆಮ್ಲಜನಕ ಸೌಲಭ್ಯ ಹೊಂದಿದ 50 ಹಾಸಿಗೆಗಳ ಕೊಠಡಿ ನಿರ್ಮಾಣ ಮಾಡಲು ತೀರ್ಮಾನಿಸಲಾಗಿದೆ ಎಂದು ಶಾಸಕ ಕೆ.ವೈ. ನಂಜೇಗೌಡ ತಿಳಿಸಿದರು.

ಪಟ್ಟಣದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿ ಅಧಿಕಾರಿಗಳೊಂದಿಗೆ ಸ್ಥಳ ಪರಿಶೀಲಿಸಿದ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

ಕೋವಿಡ್ ಎರಡನೇ ಅಲೆ ಬರುವ ಬಗ್ಗೆ ತಜ್ಞರು, ವೈದ್ಯರು ಮೊದಲೇ ಎಚ್ಚರಿಕೆ ನೀಡಿದ್ದರು. ಆದರೂ ಸರ್ಕಾರ, ಜನಪ್ರತಿನಿಧಿಗಳು ಎಚ್ಚೆತ್ತುಕೊಳ್ಳಲಿಲ್ಲ. ಸೋಂಕಿನ ಸಂಖ್ಯೆ ಹೆಚ್ಚಾಗಿ ರೋಗಿಗಳಿಗೆ ಸರಿಯಾದ ರೀತಿಯಲ್ಲಿ ಹಾಸಿಗೆ, ವೆಂಟಿಲೇಟರ್, ಆಮ್ಲಜನಕ, ಔಷಧಿ ಸಿಗದೇ ಸಾವಿರಾರು ಜನರು ಮೃತಪಟ್ಟಿದ್ದಾರೆ. ಇನ್ನೂ ಕೆಲವು ಮಂದಿ ಆಸ್ಪತ್ರೆಯಲ್ಲಿ ಜೀವನ್ಮರಣದ ಜೊತೆ ಹೋರಾಡುತ್ತಿದ್ದಾರೆ ಎಂದರು.

ತಾಲ್ಲೂಕಿನ ಅಧಿಕಾರಿಗಳು, ಆಶಾ ಕಾರ್ಯಕರ್ತೆಯರು, ವೈದ್ಯಕೀಯ ಸಿಬ್ಬಂದಿ, ಪೊಲೀಸ್ ಸಿಬ್ಬಂದಿ ಹಾಗೂ ತಾಲ್ಲೂಕು ಆಡಳಿತದ ಶ್ರಮದಿಂದ ಸೋಂಕಿತರ ಸಂಖ್ಯೆ ಕಡಿಮೆಯಾಗಿದೆ. ಮೃತರ ಸಂಖ್ಯೆಯು ಕಡಿಮೆಯಾಗಿದೆ ಎಂದು ತಿಳಿಸಿದರು.

ಮೂರನೇ ಅಲೆ ಬರುವ ಲಕ್ಷಣ ಇರುವುದರಿಂದ ಮುನ್ನೆಚ್ಚರಿಕೆಯಾಗಿ ಶಾಸಕರ ಅನುದಾನ ₹ 50 ಲಕ್ಷ ಸೇರಿ ದಂತೆ ತಾ.ಪಂ, ಪುರಸಭೆ, ದಾನಿಗಳ ಸಹಕಾರದಿಂದ ಸೌಲಭ್ಯ ಕಲ್ಪಿಸಲು ಕ್ರಮವಹಿಸಲಾಗುವುದು ಎಂದರು.

ತಾಲ್ಲೂಕಿನ ಜನತೆ ಭಯ, ಆತಂಕ ಪಡಬಾರದು. ಯಾರು ಸಹ ಮನೆಯಿಂದ ಹೊರಬಾರದು. ಸ್ಯಾನಿಟೈಸರ್, ಮಾಸ್ಕ್ ಬಳಸಿ, ಸಾಮಾಜಿಕ ಅಂತರ ಕಾಪಾಡಿಕೊಂಡು ಸಮುದಾಯವನ್ನು ಸೋಂಕಿನಿಂದ ದೂರ ಮಾಡಬೇಕು ಎಂದರು.

ತಹಶೀಲ್ದಾರ್ ಕೆ. ರಮೇಶ್, ಪುರಸಭಾ ಅಧ್ಯಕ್ಷ ಎನ್.ವಿ. ಮುರಳೀಧರ್, ತಾ.ಪಂ. ಇಒ ವಿ. ಕೃಷ್ಣಪ್ಪ, ವೈದ್ಯರಾದ ಡಾ.ವಸಂತ್ ಕುಮಾರ್, ಡಾ.ಪ್ರಸನ್ನ ಕುಮಾರ್, ಲೋಕೋಪಯೋಗಿ ಇಲಾಖೆಯ ಸಹಾಯಕ ಎಂಜಿನಿಯರ್‌ ರಾಜ್ ಗೋಪಾಲ್, ಸಿಪಿಐ ಮಾರ್ಕಂಡಯ್ಯ, ಮುಖಂಡರಾದ ಪಿ. ವೆಂಕಟೇಶ್, ಅಂಜಿನಿ ಸೋಮಣ್ಣ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು