ಸಂಸದ ಮುನಿಯಪ್ಪ ದುರಾಡಳಿತಕ್ಕೆ ಅಂತ್ಯವಾಡಿ: ವೆಂಕಟಮುನಿಯಪ್ಪ

7
ಕಾರ್ಯಕರ್ತರ ಸಭೆ

ಸಂಸದ ಮುನಿಯಪ್ಪ ದುರಾಡಳಿತಕ್ಕೆ ಅಂತ್ಯವಾಡಿ: ವೆಂಕಟಮುನಿಯಪ್ಪ

Published:
Updated:
Deccan Herald

ಕೋಲಾರ: ‘ಸಂಸದ ಕೆ.ಎಚ್.ಮುನಿಯಪ್ಪ ಅವರು ಕ್ಷೇತ್ರದಲ್ಲಿ 7 ಬಾರಿ ಗೆದ್ದಿದ್ದು ಸಾಕು. ಪಕ್ಷದ ಕಾರ್ಯಕರ್ತರು ಮುನಿಯಪ್ಪರ ದುರಾಡಳಿತಕ್ಕೆ ಅಂತ್ಯವಾಡಿ ಕ್ಷೇತ್ರ ಖಾಲಿ ಮಾಡಿಸುವ ಸಂಕಲ್ಪ ಮಾಡಬೇಕು’ ಎಂದು ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಬಿ.ಪಿ.ವೆಂಕಟಮುನಿಯಪ್ಪ ಹೇಳಿದರು.

ಇಲ್ಲಿ ಗುರುವಾರ ನಡೆದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿ, ‘ಮುಂದಿನ ಲೋಕಸಭಾ ಚುನಾವಣೆಯಲ್ಲಿ ಮುನಿಯಪ್ಪರ ಗಿಮಿಕ್ ರಾಜಕಾರಣ ನಡೆಯುವುದಿಲ್ಲ. ಅವರು ಸೋತು ಕ್ಷೇತ್ರ ಬಿಡುವುದು ನಿಶ್ಚಿತ’ ಎಂದು ಟೀಕಿಸಿದರು.

‘ಮುನಿಯಪ್ಪ ಮನಸ್ಸು ಮಾಡಿದ್ದರೆ ಕ್ಷೇತ್ರವನ್ನು ಮಾದರಿ ಕ್ಷೇತ್ರವಾಗಿ ಮಾಡಬಹುದಿತ್ತು. ಆದರೆ, ವಿಧಾನಸಭಾ ಚುನಾವಣೆಯಲ್ಲಿ ಕುಟುಂಬ ರಾಜಕಾರಣ ಮಾಡಲೆತ್ನಿಸಿ ಜನರ ವಿಶ್ವಾಸ ಕಳೆದುಕೊಂಡಿದ್ದಾರೆ. ಕ್ಷೇತ್ರದಲ್ಲಿ ಅವರ ಸಾಧನೆ ಶೂನ್ಯ’ ಎಂದು ವ್ಯಂಗ್ಯವಾಡಿದರು.

‘ಮುನಿಯಪ್ಪ 8ನೇ ಬಾರಿಗೆ ಚುನಾವಣೆಯಲ್ಲಿ ಸ್ಪರ್ಧಿಸುವುದು ಖಚಿತ. ಕ್ಷೇತ್ರದ ಜನ ಬದಲಾವಣೆ ಬಯಸಿದ್ದು, ಹೊಸ ಅಭ್ಯರ್ಥಿ ಗೆಲ್ಲಿಸುವ ಮನಸ್ಸು ಮಾಡಿದ್ದಾರೆ. ಹಿಂದಿನ ಚುನಾವಣೆಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಕಡಿಮೆ ಮತಗಳ ಅಂತರದಲ್ಲಿ ಸೋತಿದ್ದಾರೆ. ಈ ಬಾರಿ ಆ ರೀತಿ ಆಗಬಾರದು. ಮುನಿಯಪ್ಪರನ್ನು ಸೋಲಿಸಲು ಕಾಂಗ್ರೆಸ್ ಪಕ್ಷದಲ್ಲೇ ಗುಂಪುಗಾರಿಕೆ ಆರಂಭವಾಗಿದೆ’ ಎಂದರು.

ಸಾಧನೆಯೇ ಶ್ರೀರಕ್ಷೆ: ‘ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಸಾಧನೆಗಳೇ ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಶ್ರೀರಕ್ಷೆ. ಈ ಸಂಗತಿ ಅರಿತು ಕಾರ್ಯಕರ್ತರು ಈಗಿನಿಂದಲೇ ಚುನಾವಣೆಗೆ ಸಿದ್ಧರಾಗಬೇಕು. ಕೇಂದ್ರದ ಸಾಧನೆಗಳ ಬಗ್ಗೆ ವ್ಯಾಪಕ ಪ್ರಚಾರ ನಡೆಸಬೇಕು. ಪಕ್ಷದ ಅಭ್ಯರ್ಥಿ ಪರ ನಿಷ್ಠೆಯಿಂದ ಕೆಲಸ ಮಾಡಬೇಕು’ ಎಂದು ಕಿವಿಮಾತು ಹೇಳಿದರು.

‘ಮೋದಿ ಅವರು ಪ್ರಧಾನಿಯಾಗಿ ನಾಲ್ಕೂವರೆ ವರ್ಷವಾಗಿದೆ. ಅವರು ಜಾರಿಗೊಳಿಸಿರುವ ಜನಪರ ಯೋಜನೆಗಳು ಮನೆ ಮಾತಾಗಿವೆ. ಬೂತ್‌ ಮಟ್ಟದ ಕಾರ್ಯಕರ್ತರು ಅರ್ಹ ಫಲಾನುಭವಿಗಳಿಗೆ ಕೇಂದ್ರದ ಯೋಜನೆಗಳನ್ನು ತಲುಪಿಸಬೇಕು’ ಎಂದು ಸಲಹೆ ನೀಡಿದರು.

‘ರಾಜ್ಯದಲ್ಲಿ ಜೆಡಿಎಸ್‌– ಕಾಂಗ್ರೆಸ್‌ ಮೈತ್ರಿ ಸರ್ಕಾರ ಯಾವುದೇ ಕ್ಷಣದಲ್ಲಿ ಅಧಿಕಾರ ಕಳೆದುಕೊಳ್ಳಬಹುದು. ಪಕ್ಷದ ಬಿ.ಎಸ್‌.ಯಡಿಯೂರಪ್ಪ ಅವರು ಮತ್ತೊಮ್ಮೆ ಮುಖ್ಯಮಂತ್ರಿಯಾಗುವುದು ನಿಶ್ಚಿತ. ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ಯಾವುದೇ ಸಂದರ್ಭದಲ್ಲೂ ಘೊಷಣೆಯಾಗಬಹುದು’ ಎಂದು ಹೇಳಿದರು.

ಕರಪತ್ರ ಹಂಚಿ: ‘ಕೇಂದ್ರದ ಯೋಜನೆಗಳು ಪ್ರತಿ ಪ್ರಜೆಗೂ ತಿಳಿದಿವೆ. ಯೋಜನೆಗಳ ಮಾಹಿತಿ ಒಳಗೊಂಡ ಕರಪತ್ರಗಳನ್ನು ಮನೆ ಮನೆಗೆ ಹಂಚಿದರೆ ಫಲಾನುಭವಿಗಳು ಯೋಜನೆಯ ಪ್ರಯೋಜನ ಪಡೆಯಲು ಮುಂದಾಗುತ್ತಾರೆ’ ಎಂದು ಪಕ್ಷದ ವಿಭಾಗೀಯ ಪ್ರಮುಖ್ ಸಚ್ಚಿದಾನಂದ ಮೂರ್ತಿ ಅಭಿಪ್ರಾಯಪಟ್ಟರು.

‘ಕೋಲಾರ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ 8 ವಿಧಾನಸಭಾ ಕ್ಷೇತ್ರಗಳಿವೆ. ಪ್ರತಿ ಕ್ಷೇತ್ರದ ಕೇಂದ್ರ ಸ್ಥಾನದಲ್ಲಿ ಪ್ರಚಾರ ಫಲಕದಲ್ಲಿ ಯೋಜನೆಗಳ ಮಾಹಿತಿ ಇರಬೇಕು. ವಿರೋಧ ಪಕ್ಷಗಳ ಅಭ್ಯರ್ಥಿಗಳ ಬಗ್ಗೆ ರಚನಾತ್ಮಕ ಟೀಕೆ ಮಾಡಬೇಕು’ ಎಂದು ಹೇಳಿದರು.

ರಾಜ್ಯ ಬಿಜೆಪಿ ಯುವ ಮೋರ್ಚಾ ಉಪಾಧ್ಯಕ್ಷ ಓಂಶಕ್ತಿಚಲಪತಿ, ನಗರ ಘಟಕದ ಅಧ್ಯಕ್ಷ ನಾರಾಯಣಸ್ವಾಮಿ ಹಾಜರಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !