ಮಂಗಳವಾರ, ಜೂನ್ 22, 2021
22 °C

ಕರ್ಫ್ಯೂ: 6 ಅಂಗಡಿಗೆ ಬೀಗ ಮುದ್ರೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಶ್ರೀನಿವಾಸಪುರ: ಪಟ್ಟಣದಲ್ಲಿ ಕರ್ಫ್ಯೂ ಸಂದರ್ಭದಲ್ಲಿ ನಿಯಮ ಬಾಹಿರವಾಗಿ ವ್ಯಾಪಾರ ವಹಿವಾಟು ನಡೆಸುತ್ತಿದ್ದ 6 ಅಂಗಡಿಗಳ ಮೇಲೆ ಕಂದಾಯ ಹಾಗೂ ಪುರಸಭೆ ಅಧಿಕಾರಿಗಳು ದಾಳಿ ನಡೆಸಿ ಬೀಗ ಮುದ್ರೆ ಹಾಕಿದರು.

ತಹಶೀಲ್ದಾರ್ ಎಸ್.ಎಂ.ಶ್ರೀನಿವಾಸ್ ಮಾತನಾಡಿ, ಕೊರೊನಾ ಸಂಕಷ್ಟದಿಂದ ಜನರನ್ನು ಪಾರುಮಾಡಲು ಸರ್ಕಾರ ಹಲವು ಕ್ರಮ ಕೈಗೊಂಡಿದೆ. ಕರ್ಫ್ಯೂ ನಿಯಮಗಳನ್ನು ಗಾಳಿಗೆ ತೂರಿ ವ್ಯವಹರಿಸುವ ವ್ಯಾಪಾರಿಗಳು ಹಾಗೂ ಸಾರ್ವಜನಿರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಪುರಸಭೆ ಮುಖ್ಯಾಧಿಕಾರಿ ಡಿ.ಶೇಖರ್ ರೆಡ್ಡಿ ಮಾತನಾಡಿ, ಕರ್ಫ್ಯೂ ಸಂದರ್ಭದಲ್ಲಿ ಸಮಯ ಪಾಲನೆ ಅತ್ಯಗತ್ಯ. ನಿಷೇಧಿತ ಪ್ಲಾಸ್ಟಿಕ್ ವಸ್ತುಗಳ ಮಾರಾಟ ನಿಯಮ ಬಾಹಿರ. ಅಂಥ ವಸ್ತುಗಳನ್ನು ವಶಪಡಿಸಿಕೊಂಡು ದಂಡ ವಿಧಿಸಲಾಗುವುದು. ಪಟ್ಟಣದಲ್ಲಿ ಸ್ವಚ್ಛತೆಗೆ ಆದ್ಯತೆ ನೀಡಬೇಕು. ಕೋವಿಡ್ ನಿಯಮಗಳನ್ನು ತಪ್ಪದೆ ಪಾಲಿಸಬೇಕು ಎಂದು ಹೇಳಿದರು.

ಪುರಸಭೆ ಆರೋಗ್ಯ ನಿರೀಕ್ಷಕ ಪೃಥ್ವಿರಾಜ್ ಹಾಗೂ ಪುರಸಭೆ ಸಿಬ್ಬಂದಿ ದಾಳಿಯಲ್ಲಿ ಭಾಗವಹಿಸಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.