ಗುರುವಾರ , ಜುಲೈ 29, 2021
27 °C

ಕೋಲಾರ: 6 ಮಂದಿಗೆ ಕೊರೊನಾ ಸೋಂಕು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೋಲಾರ: ಜಿಲ್ಲೆಯಲ್ಲಿ ಬುಧವಾರ ಮತ್ತೆ 6 ಮಂದಿಗೆ ಕೊರೊನಾ ಸೋಂಕು ಹರಡಿದ್ದು, ಇದರೊಂದಿಗೆ ಸೋಂಕಿತರ ಸಂಖ್ಯೆ 110ಕ್ಕೆ ಏರಿಕೆಯಾಗಿದೆ.

ಕೆಜಿಎಫ್‌ನ ಬೆಮಲ್‌ ಉದ್ಯೋಗಿಯೊಬ್ಬರಿಗೆ ಸೋಂಕು ಇರುವುದು ದೃಢಪಟ್ಟಿದೆ. ಸುಮತಿ ನಗರದಲ್ಲಿ ವಾಸವಾಗಿರುವ ಇವರು ವಿಷಮ ಶೀತ ಜ್ವರದಿಂದ ಬಳಲುತ್ತಿದ್ದಾರೆ. ಇವರಿಗೆ ಸೋಂಕಿತ ಸಹೋದ್ಯೋಗಿಯಿಂದ ಸೋಂಕು ಹರಡಿದೆ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಕೆಜಿಎಫ್‌ನ ಎಸ್‌.ಟಿ ಬ್ಲಾಕ್‌ನ 56 ವರ್ಷದ ಮಹಿಳೆಗೆ ಸೋಂಕು ತಗುಲಿದೆ. ಇವರ ಮಗ ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಉದ್ಯೋಗಿಯಾಗಿದ್ದಾರೆ. ಕೆಲಸಕ್ಕಾಗಿ ಪ್ರತಿನಿತ್ಯ ಬೆಂಗಳೂರಿಗೆ ಹೋಗಿ ಬರುತ್ತಿದ್ದ ಮಗನಿಂದ ಮಹಿಳೆಗೆ ಸೋಂಕು ಹರಡಿರುವ ಸಾಧ್ಯತೆಯಿದೆ ಎಂದು ವೈದ್ಯರು ಶಂಕಿಸಿದ್ದಾರೆ. ಕೆಜಿಎಫ್‌ನ 58 ವರ್ಷದ ಮಹಿಳೆಯೊಬ್ಬರಿಗೆ ಸೋಂಕು ಇರುವುದು ದೃಢಪಟ್ಟಿದೆ. ಇವರು ಉಸಿರಾಟ ಸಮಸ್ಯೆಯಿಂದ ಬಳುತ್ತಿದ್ದಾರೆ.

ಶ್ರೀನಿವಾಸಪುರ ತಾಲ್ಲೂಕಿನ ವಿಷಮ ಶೀತ ಜ್ವರದಿಂದ ಬಳಲುತ್ತಿರುವ ಮೂವರು ಪುರುಷರಿಗೆ ಸೋಂಕು ಇರುವುದು ಖಚಿತವಾಗಿದೆ. ತಾಲ್ಲೂಕಿನ ಗೌನಿಪಲ್ಲಿ ಗ್ರಾಮದ 63 ವರ್ಷದ ವಯೋವೃದ್ಧರೊಬ್ಬರಿಗೆ ಸೋಂಕು ತಗುಲಿದೆ. ದಳಸನೂರು ಮತ್ತು ನಾರಮಾಕನಹಳ್ಳಿಯಲ್ಲಿ ತಲಾ ಒಬ್ಬರಿಗೆ ಸೋಂಕು ಹರಡಿದೆ.

110ಕ್ಕೆ ಏರಿಕೆ: ಜಿಲ್ಲೆಯಲ್ಲಿ ಒಟ್ಟಾರೆ ಸಕ್ರಿಯ ಸೋಂಕಿತರ ಸಂಖ್ಯೆ 110ಕ್ಕೆ ಏರಿಕೆಯಾಗಿದೆ. ಜಿಲ್ಲಾ ಕೇಂದ್ರದ ಕೋವಿಡ್‌ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸೋಂಕಿತರ ಪೈಕಿ ಬುಧವಾರ 4 ಮಂದಿ ಗುಣಮುಖರಾಗಿ ಮನೆಗೆ ಮರಳಿದರು. ಕೋಲಾರ ತಾಲ್ಲೂಕಿನ ಒಬ್ಬರು, ಕೆಜಿಎಫ್‌ 2 ಮತ್ತು ಶ್ರೀನಿವಾಸಪುರ ತಾಲ್ಲೂಕಿನ ಒಬ್ಬರನ್ನು ಮನೆಗೆ ಕಳುಹಿಸಲಾಯಿತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು