ಗುರುವಾರ , ಅಕ್ಟೋಬರ್ 29, 2020
19 °C

67 ಮಂದಿಗೆ ಕೊರೊನಾ ಸೋಂಕು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೋಲಾರ: ಜಿಲ್ಲೆಯಲ್ಲಿ ಹೊಸದಾಗಿ 67 ಮಂದಿಗೆ ಕೊರೊನಾ ಸೋಂಕು ಹರಡಿರುವುದು ಶುಕ್ರವಾರ ದೃಢಪಟ್ಟಿದ್ದು, ಇದರೊಂದಿಗೆ ಸಕ್ರಿಯ ಸೋಂಕಿತರ ಸಂಖ್ಯೆ 795ಕ್ಕೆ ಏರಿಕೆಯಾಗಿದೆ.

ವಿಷಮ ಶೀತ ಜ್ವರದಿಂದ ಬಳಲುತ್ತಿರುವವರಲ್ಲಿ ಹೆಚ್ಚಾಗಿ ಸೋಂಕು ಕಾಣಿಸಿಕೊಂಡಿದೆ. ವಿಷಮ ಶೀತ ಜ್ವರವಿರುವ 40 ಮಂದಿಗೆ ಮತ್ತು ಸೋಂಕಿತರ ಸಂಪರ್ಕದಿಂದ 23 ಮಂದಿಗೆ ಸೋಂಕು ತಗುಲಿರುವುದು ಖಚಿತವಾಗಿದೆ.

ಕೋಲಾರ ತಾಲ್ಲೂಕಿನಲ್ಲಿ ಅತಿ ಹೆಚ್ಚು 23 ಮಂದಿಗೆ ಸೋಂಕು ಬಂದಿದೆ. ವಿಷಮ ಶೀತ ಜ್ವರಪೀಡಿತ 14 ಮಂದಿಗೆ, ಸೋಂಕಿತರ ಸಂಪರ್ಕದಿಂದ 7 ಮಂದಿಗೆ, ಆರೋಗ್ಯ ಕಾರ್ಯಕರ್ತರೊಬ್ಬರಿಗೆ ಮತ್ತು ತೀವ್ರ ಉಸಿರಾಟ ಸಮಸ್ಯೆಯಿಂದ ಬಳಲುತ್ತಿರುವ ಒಬ್ಬರಿಗೆ ಸೋಂಕು ಬಂದಿದೆ.

ಮಾಲೂರು ತಾಲ್ಲೂಕಿನಲ್ಲಿ ವಿಷಮ ಶೀತ ಜ್ವರಕ್ಕೆ ತುತ್ತಾಗಿರುವ 3 ಮಂದಿಗೆ ಮತ್ತು ಸೋಂಕಿತರ ಸಂಪರ್ಕದಿಂದ 6 ಮಂದಿಗೆ, ಕೆಜಿಎಫ್‌ ತಾಲ್ಲೂಕಿನಲ್ಲಿ ಸೋಂಕಿತರ ಸಂಪರ್ಕದಿಂದ 6 ಮಂದಿಗೆ ಹಾಗೂ ವಿಷಮ ಶೀತ ಜ್ವರವಿರುವ ಒಬ್ಬರಿಗೆ, ಬಂಗಾರಪೇಟೆ ತಾಲ್ಲೂಕಿನಲ್ಲಿ ಸೋಂಕಿತರ ಸಂಪರ್ಕದಿಂದ 4 ಮಂದಿಗೆ ಸೋಂಕು ಹರಡಿರುವುದು ಗೊತ್ತಾಗಿದೆ.

ಮುಳಬಾಗಿಲು ತಾಲ್ಲೂಕಿನಲ್ಲಿ ವಿಷಮ ಶೀತ ಜ್ವರದಿಂದ ಬಳುತ್ತಿರುವ 17 ಮಂದಿಗೆ, ಶ್ರೀನಿವಾಸಪುರ ತಾಲ್ಲೂಕಿನಲ್ಲಿ ವಿಷಮ ಶೀತ ಜ್ವರವಿರುವ 5 ಮಂದಿಗೆ ಮತ್ತು ಇಬ್ಬರು ಗರ್ಭಿಣಿಯರಿಗೆ ಸೋಂಕು ಹರಡಿದೆ. ಸೋಂಕಿತರ ಮನೆ ಹಾಗೂ ಸುತ್ತಮುತ್ತಲ ಪ್ರದೇಶದಲ್ಲಿ ಸೋಂಕು ನಿವಾರಕ ದ್ರಾವಣ ಸಿಂಪಡಿಸಲಾಗಿದೆ. ಸೋಂಕಿತರ ಸಂಪರ್ಕಕ್ಕೆ ಬಂದ ವ್ಯಕ್ತಿಗಳನ್ನು ಪತ್ತೆ ಹಚ್ಚಿ ಕ್ವಾರಂಟೈನ್‌ ಮಾಡಲಾಗಿದೆ.

107 ಮಂದಿ ಗುಣಮುಖ: ಹೊಸದಾಗಿ ಪತ್ತೆಯಾದ ಸೋಂಕಿತರ ಸಂಖ್ಯೆಗೆ ಹೋಲಿಸಿದರೆ ಗುಣಮುಖರಾದವರ ಪ್ರಮಾಣದಲ್ಲಿ ದಾಖಲೆಯ ಏರಿಕೆಯಾಗಿದೆ. ಕೋವಿಡ್‌ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸೋಂಕಿತರ ಪೈಕಿ ಗುಣಮುಖರಾಗಿ ಮನೆಗೆ ಮರಳಿದವರ ಸಂಖ್ಯೆ ಶುಕ್ರವಾರ ಶತಕದ ಗಡಿ ದಾಟಿತು.

ಕೋಲಾರ ತಾಲ್ಲೂಕಿನ 52 ಮಂದಿ, ಮಾಲೂರು ತಾಲ್ಲೂಕಿನ 5, ಬಂಗಾರಪೇಟೆ ತಾಲ್ಲೂಕಿನ ಇಬ್ಬರು, ಕೆಜಿಎಫ್‌ ತಾಲ್ಲೂಕಿನ 20, ಮುಳಬಾಗಿಲು ತಾಲ್ಲೂಕಿನ 6 ಮತ್ತು ಶ್ರೀನಿವಾಸಪುರ ತಾಲ್ಲೂಕಿನ 22 ಮಂದಿಯನ್ನು ಆಸ್ಪತ್ರೆಯಿಂದ ಬೀಳ್ಕೊಡಲಾಯಿತು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು