ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋಲಾರ ಜಿಲ್ಲೆಯಲ್ಲಿ ಮತ್ತೆ 71 ಮಂದಿಗೆ ಸೋಂಕು

Last Updated 11 ಸೆಪ್ಟೆಂಬರ್ 2020, 16:32 IST
ಅಕ್ಷರ ಗಾತ್ರ

ಕೋಲಾರ: ಜಿಲ್ಲೆಯಲ್ಲಿ ಹೊಸದಾಗಿ 71 ಮಂದಿಗೆ ಕೊರೊನಾ ಸೋಂಕು ಹರಡಿರುವುದು ಶುಕ್ರವಾರ ದೃಢಪಟ್ಟಿದ್ದು, ಇದರೊಂದಿಗೆ ಸಕ್ರಿಯ ಸೋಂಕಿತರ ಸಂಖ್ಯೆ 777ಕ್ಕೆ ಏರಿಕೆಯಾಗಿದೆ.

ವಿಷಮ ಶೀತ ಜ್ವರದಿಂದ ಬಳಲುತ್ತಿರುವವರಲ್ಲಿ ಹೆಚ್ಚಾಗಿ ಸೋಂಕು ಕಾಣಿಸಿಕೊಂಡಿದೆ. ವಿಷಮ ಶೀತ ಜ್ವರವಿರುವ 52 ಮಂದಿಗೆ ಹಾಗೂ ಸೋಂಕಿತರ ಸಂಪರ್ಕದಿಂದ 11 ಮಂದಿಗೆ ಸೋಂಕು ತಗುಲಿರುವುದು ಖಚಿತವಾಗಿದೆ.

ಕೋಲಾರ ತಾಲ್ಲೂಕಿನಲ್ಲಿ ಅತಿ ಹೆಚ್ಚು 32 ಮಂದಿಗೆ ಸೋಂಕು ಹರಡಿದೆ. ವಿಷಮ ಶೀತ ಜ್ವರಪೀಡಿತ 18 ಮಂದಿಗೆ, ಸೋಂಕಿತರ ಸಂಪರ್ಕದಿಂದ 9 ಮಂದಿಗೆ ಮತ್ತು 5 ಮಂದಿ ಆರೋಗ್ಯ ಕಾರ್ಯಕರ್ತರಿಗೆ ಸೋಂಕು ಬಂದಿದೆ. ಮಾಲೂರು ತಾಲ್ಲೂಕಿನಲ್ಲಿ ವಿಷಮ ಶೀತ ಜ್ವರಕ್ಕೆ ತುತ್ತಾಗಿರುವ 7 ಮಂದಿಗೆ ಮತ್ತು ಸೋಂಕಿತರ ಸಂಪರ್ಕದಿಂದ ಒಬ್ಬರಿಗೆ ಸೋಂಕು ಹರಡಿದೆ.

ಬಂಗಾರಪೇಟೆ ತಾಲ್ಲೂಕಿನಲ್ಲಿ ವಿಷಮ ಶೀತ ಜ್ವರದಿಂದ ಬಳಲುತ್ತಿರುವ ಇಬ್ಬರಿಗೆ, ಸೋಂಕಿತರ ಸಂಪರ್ಕದಿಂದ ಒಬ್ಬರಿಗೆ ಹಾಗೂ ಆರೋಗ್ಯ ಕಾರ್ಯಕರ್ತರೊಬ್ಬರಿಗೆ ಸೋಂಕು ತಗುಲಿದೆ. ಕೆಜಿಎಫ್‌ ತಾಲ್ಲೂಕಿನಲ್ಲಿ ವಿಷಮ ಶೀತ ಜ್ವರವಿರುವ 16 ಮಂದಿಗೆ ಮತ್ತು ತೀವ್ರ ಉಸಿರಾಟ ಸಮಸ್ಯೆಯಿಂದ ಬಳಲುತ್ತಿರುವ ಒಬ್ಬರಿಗೆ ಸೋಂಕು ಬಂದಿದೆ.

ಮುಳಬಾಗಿಲು ತಾಲ್ಲೂಕಿನಲ್ಲಿ ವಿಷಮ ಶೀತ ಜ್ವರದಿಂದ ಬಳಲುತ್ತಿರುವ 4 ಮಂದಿಗೆ, ಶ್ರೀನಿವಾಸಪುರ ತಾಲ್ಲೂಕಿನಲ್ಲಿ ವಿಷಮ ಶೀತ ಜ್ವರಪೀಡಿತ 5 ಮಂದಿಗೆ ಮತ್ತು ಗರ್ಭಿಣಿಯೊಬ್ಬರಿಗೆ ಸೋಂಕು ಹರಡಿರುವುದು ಗೊತ್ತಾಗಿದೆ. ಸೋಂಕಿತರ ಮನೆ ಹಾಗೂ ಸುತ್ತಮುತ್ತಲ ಪ್ರದೇಶದಲ್ಲಿ ಸೋಂಕು ನಿವಾರಕ ದ್ರಾವಣ ಸಿಂಪಡಿಸಲಾಗಿದೆ. ಸೋಂಕಿತರ ಸಂಪರ್ಕಕ್ಕೆ ಬಂದ ವ್ಯಕ್ತಿಗಳನ್ನು ಪತ್ತೆ ಹಚ್ಚಿ ಕ್ವಾರಂಟೈನ್‌ ಮಾಡಲಾಗಿದೆ.

83 ಮಂದಿ ಗುಣಮುಖ: ಹೊಸದಾಗಿ ಪತ್ತೆಯಾದ ಸೋಂಕಿತರ ಸಂಖ್ಯೆಗೆ ಹೋಲಿಸಿದರೆ ಗುಣಮುಖ ಪ್ರಮಾಣದಲ್ಲಿ ಶುಕ್ರವಾರ ಕೊಂಚ ಏರಿಕೆಯಾಗಿದೆ. ಕೋವಿಡ್‌ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸೋಂಕಿತರ ಪೈಕಿ 83 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಮನೆಗೆ ಮರಳಿದರು.

ಕೋಲಾರ ತಾಲ್ಲೂಕಿನ 26 ಮಂದಿ, ಮಾಲೂರು ತಾಲ್ಲೂಕಿನ 22, ಬಂಗಾರಪೇಟೆ ತಾಲ್ಲೂಕಿನ 11, ಕೆಜಿಎಫ್‌ ತಾಲ್ಲೂಕಿನ 9, ಮುಳಬಾಗಿಲು ತಾಲ್ಲೂಕಿನ 10 ಹಾಗೂ ಶ್ರೀನಿವಾಸಪುರ ತಾಲ್ಲೂಕಿನ 5 ಮಂದಿಯನ್ನು ಆಸ್ಪತ್ರೆಯಿಂದ ಬೀಳ್ಕೊಡಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT