ಸೋಮವಾರ, 27 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮನೆಯ ಬೀಗ ಒಡೆದು ₹ 8 ಲಕ್ಷ ಕಳವು

Last Updated 8 ಮೇ 2022, 4:10 IST
ಅಕ್ಷರ ಗಾತ್ರ

ಕನಕಪುರ: ತಾಲ್ಲೂಕಿನ ಜೈನ್‌ ಕಾಲೇಜು ಬಳಿಯ ಯಡುವನಹಳ್ಳಿ ಗ್ರಾಮದಲ್ಲಿ ಗಣೇಶ್‌ ಎಂಬುವರ ಮನೆಯ ಬಾಗಿಲಿನ ಬೀಗ ಒಡೆದಿರುವ ದುಷ್ಕರ್ಮಿಗಳು ₹ 8 ಲಕ್ಷ ನಗದು ಮತ್ತು ಚಿನ್ನಾಭರಣ ಕಳವು ಮಾಡಿದ್ದಾರೆ.

ಈ ಮನೆಯು ಈಶ್ವರ್‌ ಎಂಬುವರಿಗೆ ಸೇರಿದ್ದು, ಗಣೇಶ್ ಬಾಡಿಗೆದಾರರಾಗಿದ್ದಾರೆ.

ಮನೆಯಲ್ಲಿ ಯಾರು ಇಲ್ಲದ ಸಂದರ್ಭ ನೋಡಿಕೊಂಡು ಬಾಗಿಲು ಒಡೆದು ಒಳಹೊಕ್ಕಿರುವ ಕಳ್ಳರು ಬೀರುವಿನಲ್ಲಿಟ್ಟಿದ್ದ ನಗದು ಮತ್ತು ಚಿನ್ನಾಭರಣವನ್ನು ಕಳ್ಳತನ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಬಗ್ಗೆ ಗಣೇಶ್‌ ಹಾರೋಹಳ್ಳಿ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT