ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

98 ಮಂದಿಗೆ ಕೊರೊನಾ ಸೋಂಕು

Last Updated 28 ಸೆಪ್ಟೆಂಬರ್ 2020, 14:36 IST
ಅಕ್ಷರ ಗಾತ್ರ

ಕೋಲಾರ: ಜಿಲ್ಲೆಯಲ್ಲಿ ಕೊರೊನಾ ಸೋಂಕು ಹರಡುವಿಕೆ ಪ್ರಮಾಣ ಗಣನೀಯವಾಗಿ ಏರಿಕೆಯಾಗಿದ್ದು, ಹೊಸದಾಗಿ 98 ಮಂದಿಗೆ ಸೋಂಕು ತಗುಲಿರುವುದು ಸೋಮವಾರ ದೃಢಪಟ್ಟಿದೆ.

ಇದರೊಂದಿಗೆ ಜಿಲ್ಲೆಯಲ್ಲಿ ಸಕ್ರಿಯ ಸೋಂಕಿತರ ಸಂಖ್ಯೆ 1,068ಕ್ಕೆ ಜಿಗಿದಿದೆ. ಕಳೆದ ಎರಡು ದಿನಗಳಿಂದ ಸೋಂಕಿತರ ಸಂಖ್ಯೆ ಏರು ಗತಿಯಲ್ಲೇ ಸಾಗಿದೆ. ಮುಖ್ಯವಾಗಿ ವಿಷಮ ಶೀತ ಜ್ವರದಿಂದ ಬಳಲುತ್ತಿರುವವರಲ್ಲಿ ಹೆಚ್ಚಾಗಿ ಸೋಂಕು ಕಾಣಿಸಿಕೊಳ್ಳುತ್ತಿದೆ. ಜತೆಗೆ ಸೋಂಕಿತರ ಸಂಪರ್ಕದಿಂದ ಸೋಂಕು ಹರಡುವಿಕೆ ಹೆಚ್ಚಿದೆ.

ಸೋಂಕಿತರ ಗುಣಮುಖ ಪ್ರಮಾಣ ಕೊಂಚ ಇಳಿಕೆಯಾಗಿದೆ. ಜಿಲ್ಲಾ ಕೇಂದ್ರದ ಕೋವಿಡ್‌ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸೋಂಕಿತರ ಪೈಕಿ 79 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಸೋಮವಾರ ಮನೆಗೆ ಮರಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT