ಕೋಲಾರ ತಾಲ್ಲೂಕಿನ 53 ಮಂದಿಗೆ, ಮಾಲೂರು ತಾಲ್ಲೂಕಿನ 47 ಮಂದಿಗೆ, ಬಂಗಾರಪೇಟೆ ತಾಲ್ಲೂಕಿನ 11 ಮಂದಿಗೆ, ಕೆಜಿಎಫ್ ತಾಲ್ಲೂಕಿನ 7 ಮಂದಿಗೆ, ಮುಳಬಾಗಿಲು ತಾಲ್ಲೂಕಿನ 34 ಮಂದಿಗೆ ಮತ್ತು ಶ್ರೀನಿವಾಸಪುರ ತಾಲ್ಲೂಕಿನ 27 ಮಂದಿಗೆ ಸೋಂಕು ಬಂದಿದೆ. ಈ ಸೋಂಕಿತರ ಮನೆ ಹಾಗೂ ಸುತ್ತಮುತ್ತಲ ಪ್ರದೇಶದಲ್ಲಿ ಸೋಂಕು ನಿವಾರಕ ದ್ರಾವಣ ಸಿಂಪಡಿಸಲಾಯಿತು. ಸೋಂಕಿತರ ಸಂಪರ್ಕಕ್ಕೆ ಬಂದ ವ್ಯಕ್ತಿಗಳನ್ನು ಪತ್ತೆ ಹಚ್ಚಿ ಕ್ವಾರಂಟೈನ್ ಮಾಡಲಾಗಿದೆ.