ಕೋಲಾರ ಮತ್ತು ಶ್ರೀನಿವಾಸಪುರ ತಾಲ್ಲೂಕಿನ ತಲಾ 15 ಮಂದಿಗೆ, ಮಾಲೂರು ತಾಲ್ಲೂಕಿನ 9 ಮಂದಿಗೆ, ಬಂಗಾರಪೇಟೆ ತಾಲ್ಲೂಕಿನ ಮೂವರಿಗೆ, ಕೆಜಿಎಫ್ ತಾಲ್ಲೂಕಿನ 8 ಮಂದಿಗೆ ಹಾಗೂ ಮುಳಬಾಗಿಲು ತಾಲ್ಲೂಕಿನ 14 ಮಂದಿಗೆ ಸೋಂಕು ಬಂದಿದೆ. ಈ ಸೋಂಕಿತರ ಮನೆ ಹಾಗೂ ಸುತ್ತಮುತ್ತಲ ಪ್ರದೇಶದಲ್ಲಿ ಸೋಂಕು ನಿವಾರಕ ದ್ರಾವಣ ಸಿಂಪಡಿಸಲಾಯಿತು. ಸೋಂಕಿತರ ಸಂಪರ್ಕಕ್ಕೆ ಬಂದ ವ್ಯಕ್ತಿಗಳನ್ನು ಪತ್ತೆ ಹಚ್ಚಿ ಕ್ವಾರಂಟೈನ್ ಮಾಡಲಾಗಿದೆ.