ಕೋಲಾರ, ಬಂಗಾರಪೇಟೆ ಹಾಗೂ ಶ್ರೀನಿವಾಸಪುರ ತಾಲ್ಲೂಕಿನ ತಲಾ 6 ಮಂದಿಗೆ, ಮಾಲೂರು ತಾಲ್ಲೂಕಿನ 7 ಮಂದಿಗೆ, ಕೆಜಿಎಫ್ ಮತ್ತು ಮುಳಬಾಗಿಲು ತಾಲ್ಲೂಕಿನ ತಲಾ 5 ಮಂದಿಗೆ ಸೋಂಕು ತಗುಲಿದೆ. ಈ ಸೋಂಕಿತರ ಮನೆ ಹಾಗೂ ಸುತ್ತಮುತ್ತಲ ಪ್ರದೇಶದಲ್ಲಿ ಸೋಂಕು ನಿವಾರಕ ದ್ರಾವಣ ಸಿಂಪಡಿಸಲಾಯಿತು. ಸೋಂಕಿತರ ಸಂಪರ್ಕಕ್ಕೆ ಬಂದ ವ್ಯಕ್ತಿಗಳನ್ನು ಪತ್ತೆ ಹಚ್ಚಿ ಕ್ವಾರಂಟೈನ್ ಮಾಡಲಾಗಿದೆ.