ಭಾನುವಾರ, ಆಗಸ್ಟ್ 14, 2022
20 °C

ಅಪಹರಣ: ಮತ್ತೊಬ್ಬ ಆರೋಪಿ ವಶಕ್ಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೋಲಾರ: ಮಾಜಿ ಸಚಿವ ವರ್ತೂರು ಪ್ರಕಾಶ್‌ ಅಪಹರಣ ಪ್ರಕರಣದ ಮತ್ತೊಬ್ಬ ಆರೋಪಿ ಶನಿವಾರ ರಾತ್ರಿ ಪೊಲೀಸರಿಗೆ ಸಿಕ್ಕಿಬಿದ್ದಿದ್ದು, ಬಂಧಿತರ ಸಂಖ್ಯೆ 2ಕ್ಕೇರಿದೆ.

ಪ್ರಕರಣ ಸಂಬಂಧ ಶುಕ್ರವಾರ ವಶಕ್ಕೆ ತೆಗೆದುಕೊಂಡಿದ್ದ ಬೆಂಗಳೂರಿನ ಬೌನ್ಸರ್‌ ನೀಡಿದ ಮಾಹಿತಿ ಆಧರಿಸಿ ಮತ್ತೊಬ್ಬ ಆರೋಪಿಯನ್ನು ಬಂಧಿಸಲಾಗಿದೆ ಎಂದು ಉನ್ನತ ಪೊಲೀಸ್‌ ಮೂಲಗಳು ತಿಳಿಸಿವೆ.

ಈ ಇಬ್ಬರು ಪ್ರಕರಣದ ಇತರೆ ಆರೋಪಿಗಳ ಮಾಹಿತಿ ನೀಡಿದ್ದು, ಅವರೆಲ್ಲರನ್ನೂ ಸದ್ಯದಲ್ಲೇ ಬಂಧಿಸುತ್ತೇವೆ. ಮುಖ್ಯ ಆರೋಪಿಗಳಿಬ್ಬರು ವ್ಯವಸ್ಥಿತವಾಗಿ ಸಂಚು ರೂಪಿಸಿ ಸುಪಾರಿ ಕೊಟ್ಟು ವರ್ತೂರು ಪ್ರಕಾಶ್‌ ಅವರನ್ನು ಅಪಹರಣ ಮಾಡಿಸಿದ್ದರು. ಅಪಹರಣಕಾರರ ಗುಂಪಿನ ಇಬ್ಬರಿಗೆ ಮಾತ್ರ ಆ ಮುಖ್ಯ ಆರೋಪಿಗಳ ಪರಿಚಯವಿತ್ತು ಎಂದು ತನಿಖೆಯಿಂದ ಗೊತ್ತಾಗಿದೆ ಎಂದು ಮೂಲಗಳು ಹೇಳಿವೆ.

ಪ್ರಕರಣ ಸಂಬಂಧ ಈವರೆಗೆ 18 ಮಂದಿಯ ವಿಚಾರಣೆ ನಡೆಸಲಾಗಿದೆ. ಕೃತ್ಯದಲ್ಲಿ ಭಾಗಿಯಾಗಿರುವವರು ವೃತಿಪರ ಕಳ್ಳರಾಗಿದ್ದು, ಅವರ ವಿರುದ್ಧ ಬೆಂಗಳೂರಿನ ಹಲವು ಠಾಣೆಗಳಲ್ಲಿ ಪ್ರಕರಣ ದಾಖಲಾಗಿವೆ ಎಂದು ಹಿರಿಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.