ಭಾನುವಾರ, 28 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಂಗಾರಪೇಟೆ| ಕೆಡಿಪಿ ಸಭೆಗೆ ಅಧಿಕಾರಿಗಳ ಗೈರು: ನೋಟಿಸ್ ಜಾರಿ

ಚಿಕ್ಕಅಂಕಂಡಹಳ್ಳಿ ಪಂಚಾಯಿತಿ ಕೆಡಿಪಿ ಸಭೆ
Last Updated 17 ಫೆಬ್ರುವರಿ 2023, 4:59 IST
ಅಕ್ಷರ ಗಾತ್ರ

ಬಂಗಾರಪೇಟೆ: ತಾಲ್ಲೂಕಿನ ಚಿಕ್ಕಅಂಕಂಡಹಳ್ಳಿ ಪಂಚಾಯಿತಿಯಲ್ಲಿ ಏರ್ಪಡಿಸಿದ್ದ ಕೆಡಿಪಿ ಸಭೆಗೆ ಬಹುತೇಕ ಅಧಿಕಾರಿಗಳು ಗೈರಾಗಿದ್ದು, ಸದಸ್ಯರ ಆಕ್ರೋಶಕ್ಕೆ ಕಾರಣವಾಯಿತು.

ಪಂಚಾಯಿತಿ ಅಧ್ಯಕ್ಷ ಎಚ್.ಎಂ.ರವಿ ಮಾತನಾಡಿ, ಅಧಿಕಾರಿಗಳು ಕೆಡಿಪಿ ಸಭೆಗೆ ಗೈರಾಗುವ ಮೂಲಕ ಬೇಜವಾಬ್ದಾರಿ ತೋರಿದ್ದಾರೆ. ಸದರಿ ಅಧಿಕಾರಿಗಳಿಗೆ ನೋಟಿಸ್ ಜಾರಿ ಮಾಡಿ, ಉನ್ನತ ಅಧಿಕಾರಿಗಳಿಗೆ ದೂರು ನೀಡಲಾಗುವುದು ಎಂದು ತಿಳಿಸಿದರು.

ಅರಣ್ಯ ಇಲಾಖೆ, ತೋಟಗಾರಿಕೆ ಇಲಾಖೆ, ಗ್ರಾಮೀಣ ಬ್ಯಾಂಕ್, ಪಶು ವೈದ್ಯ ಇಲಾಖೆ ಅಧಿಕಾರಿಗಳು ಮಾತ್ರ ಹಾಜರಿದ್ದು, ಇತರೆ ಇಲಾಖೆ ಅಧಿಕಾರಿಗಳು ಗೈರು ಹಾಜರಾಗುವ ಮೂಲಕ ಪ್ರಜಾಪ್ರಭುತ್ವದ ವ್ಯವಸ್ಥೆಗೆ ದಕ್ಕೆ ತಂದಿದ್ದಾರೆ ಎಂದರು.

ಸರ್ಕಾರದ ಆದೇಶದಂತೆ 27 ಇಲಾಖೆಯ ಅಧಿಕಾರಿಗಳು ಕೆಡಿಪಿ ಸಭೆಗೆ ಹಾಜರಾಗಬೇಕಿತ್ತು. ಕಳೆದ ಕೆಡಿಪಿ ಸಭೆಗೆ ಕೆಲ ಅಧಿಕಾರಿಗಳು ಆಗಮಿಸಿರಲಿಲ್ಲ. ಹಾಗಾಗಿ ಹಲ ಸಮಸ್ಯೆ ಬಗ್ಗೆ ಕುಲಂಕುಷವಾಗಿ ಚರ್ಚಿಸಲಾಗಿಲ್ಲ. ಈ ಬಾರಿ ಕಡ್ಡಾಯವಾಗಿ ಎಲ್ಲಾ ಅಧಿಕಾರಿಗಳು ಸಭೆಗೆ ಹಾಜರಾಗುವಂತೆ ಸುತ್ತೋಲೆ ನೀಡಲಾಗಿತ್ತು. ಆದಾಗ್ಯೂ ಅಧಿಕಾರಿಗಳು ನಿರ್ಲಕ್ಷ್ಯ ತೋರಿದ್ದಾರೆ ಎಂದು ಅಧಿಕಾರಿಗಳ ವಿರುದ್ಧ ಬೇಸರ ವ್ಯಕ್ತಪಡಿಸಿದರು.

ಸಿಗೆ ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಆಗದಂತೆ ಎಚ್ಚರ ವಹಿಸುವುದು ಅಧಿಕಾರಿಗಳ ಹಾಗೂ ಜನಪ್ರತಿನಿಧಿಗಳ ಕರ್ತವ್ಯ. ಕೆಲ ಗ್ರಾಮಗಳ ಅಂಗಡಿಗಳಲ್ಲಿ ಅಕ್ರಮವಾಗಿ ಮಧ್ಯ ಮಾರಾಟವಾಗುತ್ತಿದೆ ಎಂದು ಸಾರ್ವಜನಿಕರು ದೂರು ನೀಡಿದ್ದಾರೆ. ಜತೆಗೆ ಮೂಲಸೌಕರ್ಯ ಒದಗಿಸುವುದು ಸೇರಿದಂತೆ ಹಲವು ಸಮಸ್ಯೆ ಬಗ್ಗೆ ಚರ್ಚಿಸಿ ನಿರ್ಣಯ ಕೈಗೊಳ್ಳಬೇಕಿತ್ತು. ಅಧಿಕಾರಿಗಳ ಬೇಜವಾಬ್ದಾರಿಯಿಂದ ಸೂಕ್ತ ನಿರ್ಣಯ ಕೈಗೊಳ್ಳಲು ಆಗುತ್ತಿಲ್ಲ. ಹೀಗಾದರೆ ಜನರಿಗೆ ನ್ಯಾಯ ಒದಗಿಸುವುದಾದರು ಹೇಗೆ ಎಂದು ಪ್ರಶ್ನಿಸಿದರು.

ಪಿಡಿಓ ಚಿತ್ರಾ, ಸ್ಥಾಯಿ ಸಮಿತಿ ಅಧ್ಯಕ್ಷ ಸೈಯಾದ್ ನಯಾಜ್, ಪಶು ವೈದ್ಯಾಧಿಕಾರಿ ಪ್ರಿಯಾಂಕ, ಉಪ ಅರಣ್ಯ ಅಧಿಕಾರಿ ಸೋಮು, ಕರ್ನಾಟಕ ಗ್ರಾಮೀಣ ಬ್ಯಾಂಕ್ ವ್ಯವಸ್ಥಾಪಕ ಕೋದಂಡರಾಮ ರೆಡ್ಡಿ, ತೋಟಗಾರಿಕೆ ಇಲಾಖೆ ಸೌಮ್ಯ, ಗ್ರಂಥಾಲಯ ಅಧಿಕಾರಿ ಅರುಣ್ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT