ಶನಿವಾರ, 23 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೆಜಿಎಫ್‌: ಪರಾರಿಯಾಗಿದ್ದ ಆರೋಪಿಗಳ ಬಂಧನ

Published 24 ಆಗಸ್ಟ್ 2023, 15:28 IST
Last Updated 24 ಆಗಸ್ಟ್ 2023, 15:28 IST
ಅಕ್ಷರ ಗಾತ್ರ

ಕೆಜಿಎಫ್‌: ನ್ಯಾಯಾಲಯದಿಂದ ವಾರಂಟ್ ಹೊರಡಿಸಿದ್ದರೂ, ಪೊಲೀಸರ ಕಣ್ಣು ತಪ್ಪಿಸಿ ಪರಾರಿಯಾಗಿದ್ದ ಎಂಟು ಮಂದಿಯನ್ನು ಕೆಜಿಎಫ್ ಪೊಲೀಸ್ ಜಿಲ್ಲೆಯಲ್ಲಿ ಬಂಧಿಸಲಾಗಿದೆ.

ಪ್ರಕರಣಗಳಲ್ಲಿ ಭಾಗಿಯಾಗಿ ನ್ಯಾಯಾಲಯಕ್ಕೆ ಹಾಜರಾಗಿ, ನಂತರ ನಾಪತ್ತೆಯಾಗಿದ್ದವರ ಪತ್ತೆಗಾಗಿ ಜಿಲ್ಲಾ ಪೊಲೀಸರು ಪತ್ತೆ ಕ್ರಮ ಕೈಗೊಂಡಿದ್ದರು. ಎರಡರಿಂದ ಐದು ವರ್ಷದವರೆಗೆ ನಾಪತ್ತೆಯಾದವರನ್ನು ಪತ್ತೆ ಹಚ್ಚಲಾಗಿದೆ. ರಾಬರ್ಟಸನ್‌‍ಪೇಟೆ, ಆಂಡರಸನ್‌ಪೇಟೆ ಮತ್ತು ಕಾಮಸಮುದ್ರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಾಪತ್ತೆಯಾಗಿದ್ದ ಆರು ಮಂದಿಯನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಂ.ಶಾಂತರಾಜು ಮಾಹಿತಿ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT