ಭಾನುವಾರ, ಆಗಸ್ಟ್ 7, 2022
21 °C

ಮಾಲೂರು: ಎಸಿಬಿ ಅಧಿಕಾರಿಗಳ ದಾಳಿ, ದಾಖಲೆ ಪರಿಶೀಲನೆ 

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮಾಲೂರು: ಇಲ್ಲಿನ ನಗರ ಯೋಜನಾ ಪ್ರಾಧಿಕಾರದ ಕಾರ್ಯದರ್ಶಿ ಎಚ್.ಆರ್. ಕೃಷ್ಣಪ್ಪ ಅವರ ಬೆಂಗಳೂರು ಮನೆ ಮೇಲೆ ಎಸಿಬಿ ಅಧಿಕಾರಿಗಳು ಗುರುವಾರ ದಾಳಿ ನಡೆಸಿದ್ದಾರೆ. ಇದರ ಭಾಗವಾಗಿ ಪಟ್ಟಣದ ಮಾರುತಿ ಬಡಾವಣೆಯಲ್ಲಿರುವ ಯೋಜನಾ ಪ್ರಾಧಿಕಾರದ ಕಚೇರಿ ಮೇಲೂ ದಾಳಿ ನಡೆಸಿ ದಾಖಲೆ ಪತ್ರಗಳನ್ನು ಪರಿಶೀಲನೆ ನಡೆಸಿದರು.

ಕೃಷ್ಣಪ್ಪ ಅವರ ಸ್ವಗ್ರಾಮವಾದ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ ದೇವರಹಳ್ಳಿಯ ಮನೆ, ಬೆಂಗಳೂರು, ಶಿವಮೊಗ್ಗ ಮನೆ ಮತ್ತು ಕಚೇರಿ ಸೇರಿದಂತೆ ಅವರಿಗೆ ಸೇರಿದ ಐದು ಕಡೆಗಳಲ್ಲಿ ಏಕಕಾಲಕ್ಕೆ ದಾಳಿ ನಡೆದಿದೆ.

ಯೋಜನಾ ಪ್ರಾಧಿಕಾರ ಕಚೇರಿಯಲ್ಲಿ ಕಳೆದ ಮೂರು ತಿಂಗಳಿನಿಂದ ಕೃಷ್ಣಪ್ಪ ಅವರು ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಐವರು ಅಧಿಕಾರಿಗಳ ತಂಡ ಕಚೇರಿಗೆ ಭೇಟಿ ನೀಡಿ ಕೆಲವು ದಾಖಲೆ ಪತ್ರಗಳನ್ನು ಪರಿಶೀಲನೆ ನಡೆಸಿತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು