ಶ್ರೀನಿವಾಸಪುರ: ಶ್ರೀನಿವಾಸಪುರ–ಮುಳಬಾಗಿಲು ರಸ್ತೆಯ ಮೀಸಗಾನಹಳ್ಳಿ ಗೇಟ್ ಬಳಿ ಶುಕ್ರವಾರ ಎರಡು ವಾಹನಗಳ ಮಧ್ಯೆ ಡಿಕ್ಕಿಯಾಗಿ ಮಹಿಳೆ ಮೃತಪಟ್ಟಿದ್ದಾರೆ. ಎಂಟು ಮಂದಿ ಗಾಯಗೊಂಡಿದ್ದಾರೆ.

ಯಶೋಧಮ್ಮ (50) ಮೃತ ಮಹಿಳೆ. ಶ್ರೀನಿವಾಸಪುರದಿಂದ ಮುಳಬಾಗಿಲು ಕಡೆ ಹೋಗುತ್ತಿದ್ದ ಆಟೊಗೆ ಮುಳಬಾಗಿಲಿನಿಂದ ಶ್ರೀನಿವಾಸಪುರಕ್ಕೆ ಬರುತ್ತಿದ್ದ ಕ್ಯಾಂಟರ್ ವಾಹನ ಡಿಕ್ಕಿ ಹೊಡೆದಿದೆ ಎಂಬುದು ಗೊತ್ತಾಗಿದೆ.

ಆಟೋದಲ್ಲಿ ಹೋಗುತ್ತಿದ್ದ ಒಂದೇ ಕುಟುಂಬದ 8 ಜನರು ಗಂಭೀರ ಗಾಯಗೊಂಡಿದ್ದು, ಕೆಲವರನ್ನು ಕೋಲಾರ ಎಸ್ಎನ್ಆರ್ ಆಸ್ಪತ್ರೆಗೆ, ಇನ್ನು ಕೆಲವರನ್ನು ಕೋಲಾರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.