ಭಾನುವಾರ, 28 ಮೇ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಪಘಾತ: ಶಾಸಕರ ಪುತ್ರ ಪಾರು

Last Updated 2 ಜುಲೈ 2021, 4:38 IST
ಅಕ್ಷರ ಗಾತ್ರ

ಕೋಲಾರ: ತಾಲ್ಲೂಕಿನ ಉರಟಿ ಅಗ್ರಹಾರ ಗೇಟ್‌ ಬಳಿ ಗುರುವಾರ ಮಧ್ಯಾಹ್ನ ಸಂಭವಿಸಿದ ಕಾರು ಅಪಘಾತದಲ್ಲಿ ಶಾಸಕ ಕೆ. ಶ್ರೀನಿವಾಸಗೌಡ ಅವರ ಪುತ್ರ ಮಂಜುನಾಥ್‌ ಗಾಯಗೊಂಡಿದ್ದಾರೆ.

ಮಂಜುನಾಥ್‌ ಅವರು ಕಾರಿನಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿಗೆ ಹೋಗುತ್ತಿದ್ದ ಸಂದರ್ಭದಲ್ಲಿ ಈ ದುರ್ಘಟನೆ ನಡೆದಿದೆ. ಎದುರುಗಡೆಯಿಂದ ಕಾರಿಗೆ ಅಡ್ಡ ಬಂದ ಬೈಕ್‌ ಸವಾರನನ್ನು ಪಾರು ಮಾಡುವ ಯತ್ನದಲ್ಲಿ ಮಂಜುನಾಥ್‌ ಅವರ ಕಾರು ನಿಯಂತ್ರಣ ತಪ್ಪಿ ರಸ್ತೆಬದಿಯಲ್ಲಿ ಮಗುಚಿ ಬಿದ್ದಿದೆ ಎಂದು ವೇಮಗಲ್‌ ಪೊಲೀಸರು ತಿಳಿಸಿದ್ದಾರೆ.

ಮಂಜುನಾಥ್‌ ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಕಾರು ಜಖಂಗೊಂಡಿದೆ. ಘಟನೆ ಸಂಬಂಧ ಯಾವುದೇ ಪ್ರಕರಣ ದಾಖಲಿಸಿಲ್ಲ ಎಂದು ಹೇಳಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT