ಭಾನುವಾರ, ಜೂನ್ 7, 2020
27 °C

ಅಪಘಾತ: ಪೊಲೀಸ್‌ ಸಿಬ್ಬಂದಿಗೆ ಗಾಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕೋಲಾರ: ತಾಲ್ಲೂಕಿನ ಶ್ರೀನಿವಾಸಪುರ ರಸ್ತೆಯ ಅರಿನಾಗನಹಳ್ಳಿ ಗೇಟ್‌ ಬಳಿ ಮಂಗಳವಾರ ಜಿಲ್ಲಾ ಸಶಸ್ತ್ರ ಮೀಸಲು ಪೊಲೀಸ್‌ ಪಡೆ (ಡಿಎಆರ್‌) ವಾಹನ ಮಗುಚಿ ಬಿದ್ದು, ಮೂವರು ಪೊಲೀಸ್‌ ಸಿಬ್ಬಂದಿ ಗಾಯಗೊಂಡಿದ್ದಾರೆ.

ಡಿಎಆರ್‌ನ 5 ಮಂದಿ ಕಾನ್‌ಸ್ಟೆಬಲ್‌ಗಳು ಇಲಾಖೆಯ ವಾಹನದಲ್ಲಿ ಜಿಲ್ಲಾ ಕೇಂದ್ರದಿಂದ ಶ್ರೀನಿವಾಸಪುರಕ್ಕೆ ಕರ್ತವ್ಯ ನಿರ್ವಹಣೆಗೆ ಹೋಗುತ್ತಿದ್ದಾಗ ಈ ದುರ್ಘಟನೆ ನಡೆದಿದೆ. ಗಾಯಾಳುಗಳಾದ ಮಂಜುನಾಥ್‌, ಕೇಶವ್‌ ಹಾಗೂ ವೇಣು ಅವರನ್ನು ಆರ್‌.ಎಲ್‌.ಜಾಲಪ್ಪ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಡಿಎಆರ್‌ ವಾಹನ ಚಾಲಕ ಎದುರುಗಡೆಯಿಂದ ವೇಗವಾಗಿ ಬಂದ ಖಾಸಗಿ ವಾಹನವು ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಎಡ ಭಾಗಕ್ಕೆ ವಾಹನ ತಿರುಗಿಸಿದ್ದಾರೆ. ಈ ವೇಳೆ ಡಿಎಆರ್‌ ವಾಹನ ನಿಯಂತ್ರಣ ತಪ್ಪಿ ಮಗುಚಿ ಬಿದ್ದಿದೆ ಎಂದು ಗ್ರಾಮಾಂತರ ಠಾಣೆ ಪೊಲೀಸರು ತಿಳಿಸಿದ್ದಾರೆ. ದೂರು ದಾಖಲಾಗಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.