ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ರೈತ ಮಹಿಳೆಯರು ಹಸಿರು ಟವೆಲ್ ಬೀಸಿದ ಸಂದರ್ಭ
ರೈತರು ಹುಟ್ಟಿನಿಂದ ಹೋರಾಟ ಮಾಡಬೇಕಾದ ಪರಿಸ್ಥಿತಿ ಇದೆ. ಎಲ್ಲವನ್ನೂ ಕೇಳಿ ಪಡೆಯಬೇಕಾದ ಪರಿಸ್ಥಿತಿ ಇದೆ. ಇದಕ್ಕೆ ವ್ಯವಸ್ಥೆ ಕಾರಣವಾಗಿರುವುದು ವಿಷಾದನೀಯ. ಅನೇಕ ಸವಾಲು ಸಮಸ್ಯೆ ಇವೆ
ಎಂ.ಆರ್.ರವಿ ಜಿಲ್ಲಾಧಿಕಾರಿ
ಜಿಲ್ಲೆಯಲ್ಲಿ ಅಪಘಾತದಲ್ಲಿ ಈ ವರ್ಷ 267 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ದ್ವಿಚಕ್ರ ವಾಹನ ಅಪಘಾತದಲ್ಲಿ ರೈತರು ಹೆಚ್ಚಾಗಿ ಮೃತಪಡುತ್ತಿದ್ದಾರೆ. ಹೀಗಾಗಿ ಕಡ್ಡಾಯವಾಗಿ ಹೆಲ್ಮೆಟ್ ಬಳಸಿ
ನಿಖಿಲ್ ಬಿ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ
ಆರ್ಥಿಕ ದಿವಾಳಿಯಾಗಿ ಹಲವು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಯಾರೂ ಇಂಥ ಕೆಲಸಕ್ಕೆ ಇಳಿಯಬಾರದು. ತಮ್ಮ ಏನೇ ಸಮಸ್ಯೆ ಇದ್ದರೂ ನಮ್ಮ ಬಳಿ ಹೇಳಿಕೊಳ್ಳಿ. ಸಹಾಯ ಮಾಡುತ್ತೇವೆ