ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಾವಿರದ ಗಡಿ ದಾಟಿದ ಸಕ್ರಿಯ ಸೋಂಕಿತರು

Last Updated 11 ಆಗಸ್ಟ್ 2020, 16:32 IST
ಅಕ್ಷರ ಗಾತ್ರ

ಕೋಲಾರ: ಜಿಲ್ಲೆಯಲ್ಲಿ ಹೊಸದಾಗಿ 69 ಮಂದಿಗೆ ಕೊರೊನಾ ಸೋಂಕು ಹರಡಿರುವುದು ಮಂಗಳವಾರ ದೃಢಪಟ್ಟಿದ್ದು, ಸಕ್ರಿಯ ಸೋಂಕಿತರ ಸಂಖ್ಯೆ ಸಾವಿರದ ಗಡಿ ದಾಟಿದೆ.

ಮುಖ್ಯವಾಗಿ ವಿಷಮ ಶೀತ ಜ್ವರದಿಂದ ಬಳಲುತ್ತಿರುವ 49 ಮಂದಿಗೆ ಸೋಂಕು ತಗುಲಿದೆ. ಉಳಿದಂತೆ ಸೋಂಕಿತರ ಸಂಪರ್ಕದಿಂದ 19 ಮಂದಿಗೆ ಸೋಂಕು ಹರಡಿದೆ.

ಕೋಲಾರ ತಾಲ್ಲೂಕಿನಲ್ಲಿ ಅತಿ ಹೆಚ್ಚು 25 ಮಂದಿಗೆ ಸೋಂಕು ಹರಡಿರುವುದು ಖಚಿತವಾಗಿದೆ. ವಿಷಮ ಶೀತ ಜ್ವರವಿರುವ 18 ಮಂದಿಗೆ ಮತ್ತು ಸೋಂಕಿತರ ಸಂಪರ್ಕದಿಂದ 7 ಮಂದಿಗೆ ಸೋಂಕು ತಗುಲಿದೆ. ಮಾಲೂರು ತಾಲ್ಲೂಕಿನಲ್ಲಿ 3 ಮಂದಿಗೆ ಹಾಗೂ ಶ್ರೀನಿವಾಸಪುರ ತಾಲ್ಲೂಕಿನಲ್ಲಿ ಇಬ್ಬರಿಗೆ ಸೋಂಕು ಬಂದಿದೆ. ಈ 5 ಮಂದಿಯೂ ವಿಷಮ ಶೀತ ಜ್ವರದಿಂದ ಬಳಲುತ್ತಿದ್ದಾರೆ.

ಬಂಗಾರಪೇಟೆ ತಾಲ್ಲೂಕಿನಲ್ಲಿ ವಿಷಮ ಶೀತ ಜ್ವರಕ್ಕೆ ತುತ್ತಾಗಿರುವ 5 ಮಂದಿಗೆ ಮತ್ತು ಸೋಂಕಿತರ ಸಂಪರ್ಕದಿಂದ ಒಬ್ಬರಿಗೆ ಸೋಂಕು ಬಂದಿದೆ. ಕೆಜಿಎಫ್‌ ತಾಲ್ಲೂಕಿನಲ್ಲಿ ವಿಷಮ ಶೀತ ಜ್ವರದಿಂದ ಬಳಲುತ್ತಿರುವ 10 ಮಂದಿಗೆ ಮತ್ತು ಸೋಂಕಿತರ ಸಂಪರ್ಕಕ್ಕೆ ಬಂದ 5 ಮಂದಿಗೆ ಸೋಂಕು ತಗುಲಿದೆ.

ಮುಳಬಾಗಿಲು ತಾಲ್ಲೂಕಿನಲ್ಲಿ ವಿಷಮ ಶೀತ ಜ್ವರವಿರುವ 11 ಮಂದಿಗೆ, ಸೋಂಕಿತರ ಸಂಪರ್ಕದಿಂದ 6 ಮಂದಿಗೆ ಮತ್ತು ತೀವ್ರ ಉಸಿರಾಟ ಸಮಸ್ಯೆಯಿರುವ ಒಬ್ಬರಿಗೆ ಸೋಂಕು ಹರಡಿದೆ. ಸೋಂಕಿತರ ಮನೆ ಹಾಗೂ ಸುತ್ತಮುತ್ತಲ ಪ್ರದೇಶವನ್ನು ಸೀಲ್‌ಡೌನ್‌ ಮಾಡಲಾಗಿದೆ. ಸುರಕ್ಷತಾ ಕ್ರಮವಾಗಿ ಇಡೀ ಪ್ರದೇಶದಲ್ಲಿ ಸೋಂಕು ನಿವಾರಕ ದ್ರಾವಣ ಸಿಂಪಡಿಸಲಾಗಿದೆ. ಸೋಂಕಿತರ ಸಂಪರ್ಕಕ್ಕೆ ಬಂದ ವ್ಯಕ್ತಿಗಳನ್ನು ಕ್ವಾರಂಟೈನ್‌ ಮಾಡಲಾಗಿದೆ.

26 ಮಂದಿ ಗುಣಮುಖ: ಕೋವಿಡ್‌ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸೋಂಕಿತರ ಪೈಕಿ 26 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಮಂಗಳವಾರ ಮನೆಗೆ ಮರಳಿದರು. ಕೋಲಾರ ತಾಲ್ಲೂಕಿನ 17 ಮಂದಿ, ಮಾಲೂರು ತಾಲ್ಲೂಕಿನ 4 ಮಂದಿ, ಬಂಗಾರಪೇಟೆ ಮತ್ತು ಶ್ರೀನಿವಾಸಪುರ ತಾಲ್ಲೂಕಿನ ತಲಾ ಇಬ್ಬರು, ಕೆಜಿಎಫ್‌ ತಾಲ್ಲೂಕಿನ ಒಬ್ಬರನ್ನು ಮನೆಗೆ ಕಳುಹಿಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT