ಬುಧವಾರ, ಜುಲೈ 28, 2021
26 °C

ನಂಗಲಿ: 27ಕ್ಕೆ ಆದರ್ಶ ಶಾಲೆಗೆ ಪ್ರವೇಶ ಪರೀಕ್ಷೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ನಂಗಲಿ: ತಾತಿಕಲ್ಲು ಸಮೀಪ ಇರುವ ಆದರ್ಶ ವಿದ್ಯಾಲಯದಲ್ಲಿ 2020-21ನೇ ಸಾಲಿನಡಿ ಆರನೇ ತರಗತಿ ಪ್ರವೇಶಕ್ಕೆ ಜುಲೈ 27ರಂದು ಪ್ರವೇಶ ಪರೀಕ್ಷೆ ನಡೆಯಲಿದೆ ಎಂದು ಪ್ರಾಂಶುಪಾಲ ಬಿ.ಕೆ. ನಟರಾಜ್ ತಿಳಿಸಿದ್ದಾರೆ.

ಆದರ್ಶ ಶಾಲೆಯ ದಾಖಲಾತಿಗಾಗಿ ಈ ಹಿಂದೆ ಏ. 25ರಂದು ಪರೀಕ್ಷೆ ನಿಗದಿಪಡಿಸಲಾಗಿತ್ತು. ಆದರೆ, ಕೋವಿಡ್ ಎರಡನೇ ಅಲೆಯ ಲಾಕ್‌ಡೌನ್ ಕಾರಣದಿಂದ ವಿದ್ಯಾರ್ಥಿಗಳ ಆರೋಗ್ಯದ ದೃಷ್ಟಿಯಿಂದ ಪರೀಕ್ಷೆಯನ್ನು ರದ್ದುಪಡಿಸಲಾಗಿತ್ತು.

ಕೊರೊನಾ ಸೋಂಕು ಕಡಿಮೆಯಾಗಿರುವುದರಿಂದ ಸಮಗ್ರ ಶಿಕ್ಷಣ ಕರ್ನಾಟಕದ ರಾಜ್ಯ ಯೋಜನಾ ನಿರ್ದೇಶಕರ ಆದೇಶದಂತೆ ಪರೀಕ್ಷೆ ನಡೆಯಲಿದೆ. ಎಸ್.ಒ.ಪಿ ಪ್ರಕಾರ ಪರೀಕ್ಷಾ ಕೇಂದ್ರಗಳನ್ನು ಸಹ ನಿಗದಿಪಡಿಸಲಾಗಿದೆ. ನಂತರ ಆದರ್ಶ ಶಾಲೆಗೆ ದಾಖಲಾತಿ ಪ್ರಕ್ರಿಯೆ ನಡೆಯಲಿದೆ ಎಂದು ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು