ಶುಕ್ರವಾರ, ಮೇ 20, 2022
21 °C

17ಕ್ಕೆ ಆದರ್ಶ ಶಾಲೆಗೆ ಪ್ರವೇಶ ಪರೀಕ್ಷೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ನಂಗಲಿ: ಆದರ್ಶ ವಿದ್ಯಾಲಯದಲ್ಲಿ ಆರನೇ ತರಗತಿಯ ದಾಖಲಾತಿಗಾಗಿ ಏಪ್ರಿಲ್‌ 17ರಂದು ಪ್ರವೇಶ ಪರೀಕ್ಷೆ ನಡೆಯಲಿದೆ. ಎಲ್ಲಾ ವಿದ್ಯಾರ್ಥಿಗಳು ಪ್ರವೇಶ ಪತ್ರಗಳನ್ನು ಇಲಾಖೆಯ ವೆಬ್‌ಸೈಟ್‌ನಲ್ಲಿ ಡೌನ್‌ಲೋಡ್ ಮಾಡಿಕೊಳ್ಳಬೇಕು ಎಂದು ಮುಖ್ಯಶಿಕ್ಷಕ ಕೆ.ಬಿ. ನಟರಾಜ್ ತಿಳಿಸಿದ್ದಾರೆ.

ತಾತಿಕಲ್ಕು ಸಮೀಪ ಇರುವ ಆದರ್ಶ ಶಾಲೆಯಲ್ಲಿ ಆರನೇ ತರಗತಿಗೆ ದಾಖಲಾತಿ ಪಡೆಯಲು ಪ್ರವೇಶ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಬೇಕಾಗಿದೆ.

ಈ ಸಂಬಂಧ ಈಗಾಗಲೇ ವಿದ್ಯಾರ್ಥಿಗಳು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ವಿದ್ಯಾರ್ಥಿಗಳು ತಮ್ಮ ಅರ್ಜಿ ಸಂಖ್ಯೆ ಮತ್ತು ವಿದ್ಯಾರ್ಥಿ ಸ್ಯಾಟ್ಸ್ ಸಂಖ್ಯೆ ಮೂಲಕ www.schoolseducation.kar.nic.in ಅಥವಾ vidyavahini.Karnataka.gov.inನಲ್ಲಿ ಪ್ರವೇಶ ಪತ್ರ ಪಡೆದು ಪರೀಕ್ಷೆಗೆ ಹಾಜರಾಗಬೇಕು ಎಂದು
ತಿಳಿಸಿದ್ದಾರೆ.

ಮುಳಬಾಗಿಲು ನಗರದ ಸರ್ಕಾರಿ ಬಾಲಕಿಯರ ಪ್ರೌಢಶಾಲೆಯಲ್ಲಿ ಪರೀಕ್ಷೆ ನಡೆಯಲಿದೆ. ತಾಲ್ಲೂಕಿನ ಎಲ್ಲಾ ಸಿಆರ್‌ಪಿಗಳು ಹಾಗೂ ಪೋಷಕರು ಅರ್ಜಿ ಹಾಕಿರುವ ವಿದ್ಯಾರ್ಥಿಗಳಿಗೆ ಪ್ರವೇಶ ಪತ್ರಗಳ ಡೌನ್‌ಲೋಡ್ ಕುರಿತು ಸಹಕರಿಸಬೇಕು ಎಂದು ಮನವಿ ಮಾಡಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.